ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರ, ಕೋಮು ವಿದ್ವೇಷದಿಂದಾಗಿ ಸಂಪೂರ್ಣ ಅರಾಜಕತೆ ಸೃಷ್ಟಿಯಾಗಿದೆ. ಆದ್ದರಿಂದ “ಭ್ರಷ್ಟ ಬಿಜೆಪಿ ಸರಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿ” ಎಂಬ ಬೇಡಿಕೆಯನ್ನು ಮುಂದಿಟ್ಟು ಎಸ್.ಡಿ.ಪಿ.ಐ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಅಭಿಯಾನದ ಭಾಗವಾಗಿ ಪಕ್ಷದ ರಾಜ್ಯ ನಾಯಕರ ನಿಯೋಗ ಸೋಮವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ರಾಜ್ಯಪಾಲರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ನಿಯೋಗದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು, ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸೋ ಫ್ರಾಂಕೊ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಹಾಗೂ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ಉಪಸ್ಥಿತರಿದ್ದರು.