ಆಝಾನ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ SDPI ಪ್ರತಿಭಟನೆ

Prasthutha|

ಮೂಡಿಗೆರೆ: ಆಝಾನ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿಯ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಹಾಗೂ ಇತ್ತೀಚೆಗೆ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಪ್ರಚಾರದ ಸಂದರ್ಭದಲ್ಲಿ ಗೋಣಿಕೊಪ್ಪಲಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಭಾವಚಿತ್ರವನ್ನು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಭಾವಚಿತ್ರದ ಮೇಲೆ ಅಂಟಿಸಿ ಅಂಬೇಡ್ಕರ್ ರವರಿಗೆ ಅವಮಾನ ಮಾಡಿರುವ ಬಿಜೆಪಿ ಪದಾಧಿಕಾರಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಎಸ್.ಡಿ.ಪಿ.ಐ ಮೂಡಿಗೆರೆ ಕ್ಷೇತ್ರ ಸಮಿತಿ ಸದಸ್ಯರು ಶುಕ್ರವಾರ ಮೂಡಿಗೆರೆಯ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

- Advertisement -


ಬಿಜೆಪಿಯ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಆಝಾನ್ ಹಾಗೂ ಅಲ್ಲಾಹುವಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಸಮಾಜದಲ್ಲಿ ಕೋಮುಗಲಭೆಗೆ ಪ್ರಚೋದನೆ ಹಾಗೂ ನಾಡಿನಲ್ಲಿ ಅಶಾಂತಿಯನ್ನು ಸೃಷ್ಟಿಮಾಡಲು ಸಂಚು ಹೂಡಿದ್ದಾರೆ. ಅವರ ವಿರುದ್ಧ ತಕ್ಷಣ ಕ್ರಮಕೈಗೊಳ್ಳಬೇಕು. ಅದೇ ರೀತಿ ಇತ್ತೀಚೆಗೆ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಪ್ರಚಾರದ ಸಂದರ್ಭದಲ್ಲಿ ಗೋಣಿಕೊಪ್ಪಲಿನಲ್ಲಿ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಯವರ ಭಾವಚಿತ್ರವನ್ನು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಭಾವಚಿತ್ರದ ಮೇಲೆ ಅಂಟಿಸಿ ಅಂಬೇಡ್ಕರ್ ರವರಿಗೆ ಅವಮಾನ ಮಾಡಿರುವ ಬಿಜೆಪಿ ಪದಾಧಿಕಾರಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಈ ಪ್ರತಿಭಟನೆಯಲ್ಲಿ ಮೂಡಿಗೆರೆ ವಿಧಾನಸಭಾ ಕ್ಷೇತ್ರದ SDPI ಅಭ್ಯರ್ಥಿ ಅಂಗಡಿ ಚಂದ್ರು, ಜಿಲ್ಲಾ ಸಮಿತಿ ಸದಸ್ಯ ಎಂ.ಯು. ಶರೀಫ್ ಮೂಡಿಗೆರೆ, ತಾಲ್ಲೂಕು ಉಪಾಧ್ಯಕ್ಷ ರಿಝ್ವಾನ್ ಫಲ್ಗುಣಿ, ಸದಸ್ಯರಾದ ಖಾಲೀದ್ , ಜಾವೀದ್, ನಾಗೇಶ್ ಸಾಲುಮರ, ನಂದನ್ ಉಪಸ್ಥಿತರಿದ್ದರು.

Join Whatsapp