Home ಟಾಪ್ ಸುದ್ದಿಗಳು ಮುಸ್ಲಿಮರ ಮೀಸಲಾತಿ ಪ್ರಮಾಣವನ್ನು ಶೇ.4ರಿಂದ 7ಕ್ಕೆ ಹೆಚ್ಚಿಸಲು ಕಾಂಗ್ರೆಸ್ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಿ: ಎಸ್’ಡಿಪಿಐ ಆಗ್ರಹ

ಮುಸ್ಲಿಮರ ಮೀಸಲಾತಿ ಪ್ರಮಾಣವನ್ನು ಶೇ.4ರಿಂದ 7ಕ್ಕೆ ಹೆಚ್ಚಿಸಲು ಕಾಂಗ್ರೆಸ್ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಿ: ಎಸ್’ಡಿಪಿಐ ಆಗ್ರಹ

ಬೆಂಗಳೂರು: ಶಿಕ್ಷಣ, ಉದ್ಯೋಗ ಹಾಗೂ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತರಾಗಿ ಹಿಂದುಳಿದಿರುವ ಮುಸ್ಲಿಂ ಸಮುದಾಯದ ಮೀಸಲಾತಿ ಪ್ರಮಾಣವನ್ನು ಶೇ.4ರಿಂದ 7ಕ್ಕೆ ಹೆಚ್ಚಿಸಬೇಕು. ಈ ಬಗ್ಗೆ ಕಾಂಗ್ರೆಸ್ ಮಹಾಧಿವೇಶನದಲ್ಲಿ ನಿಲುವು ಸ್ಪಷ್ಟಪಡಿಸಲಿ. ವೆಂಕಟಸ್ವಾಮಿ, ಚಿನ್ನಪ್ಪ ರೆಡ್ಡಿ ಆಯೋಗಗಳು ಮುಸ್ಲಿಂ ಸಮುದಾಯದ 17 ವೃತ್ತಿಪರ ಗುಂಪುಗಳನ್ನು ಹಿಂದುಳಿದ ಜಾತಿಗಳೆಂದು ಗುರುತಿಸಿವೆ ಎಂದು SDPI ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಆಗ್ರಹಿಸಿದ್ದಾರೆ.


ಛತ್ತೀಸ್’ಗಡದ ರಾಯಪುರದಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷದ 85ನೇ ಮಹಾ ಅಧಿವೇಶನವನ್ನು ಉಲ್ಲೇಖಿಸಿ ಅಫ್ಸರ್ ಕೊಡ್ಲಿಪೇಟೆ ಟ್ವೀಟ್ ಮಾಡಿದ್ದು, ಮುಸ್ಲಿಮ್ ಸಮುದಾಯಕ್ಕೆ ನೀಡಲಾಗುತ್ತಿರುವ ಶೇಕಡಾ 4ರಷ್ಟು ಮೀಸಲಾತಿಯನ್ನು ಶೇಕಡಾ 7ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದ್ದಾರೆ.

Join Whatsapp
Exit mobile version