ಬೆಳ್ತಂಗಡಿ: ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕಿನ ಮೂರು ಮಂದಿಯ ಹತ್ಯೆ ನಡೆದಿದ್ದು, ಇದೊಂದು ಪೂರ್ವ ನಿಯೋಜಿತ ಕೊಲೆಯಾಗಿದೆ. ರಾಜ್ಯ ಸರಕಾರ ಈ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ ನೇಮಿಸಿ ಸೂಕ್ತ ತನಿಖೆ ನಡೆಸಬೇಕೆಂದು ಎಸ್ ಡಿಪಿಐ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ ಆಗ್ರಹಿಸಿದರು.
ವ್ಯವಹಾರ ನಿಮಿತ್ತ ಬೆಳ್ತಂಗಡಿ ತಾಲೂಕಿನ ಟಿ.ಬಿ ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್(45) , ಮದ್ದಡ್ಕ ನಿವಾಸಿ ಇಸಾಕ್(56) , ಶಿರ್ಲಾಲ್ ನಿವಾಸಿ ಇಮ್ತಿಯಾಝ್(34) ಅವರನ್ನು ತುಮಕೂರಿಗೆ ಕರೆಸಿ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ. ಇಂತಹ ಕ್ರೂರ ಕೃತ್ಯದಲ್ಲಿ ಭಾಗಿಯಾದ ಎಲ್ಲಾರಿಗೂ ಶಿಕ್ಷೆಯಾಗಬೇಕು ಮತ್ತು ಮರಣ ಹೊಂದಿದ ಅಮಾಯಕರ ಕುಟುಂಬಕ್ಕೆ ರಾಜ್ಯ ಸರಕಾರ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.