ಅಸಂಘಟಿತ ಕಾರ್ಮಿಕರಿಗೆ ಕೋವಿಡ್ ಪರಿಹಾರ ಹಣ ತಕ್ಷಣ ಬಿಡುಗಡೆ ಮಾಡಲು SDPI ಒತ್ತಾಯ

Prasthutha|

ಬೆಂಗಳೂರು: ಕರ್ನಾಟಕ ಸರಕಾರ ಕೋವಿಡ್ ಲಾಕ್ ಡೌನ್ ನಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ BPL ಕಾರ್ಡ್ ಹೊಂದಿದ ಅಸಂಘಟಿತ ಕಾರ್ಮಿಕರಿಗೆ ಘೋಷಿಸಿದ್ದ ಪರಿಹಾರ ಧನವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ರಾಜ್ಯಾಧ್ಯಕ್ಷ ಅಬ್ದುಲ್ ಹನ್ನಾನ್ ಒತ್ತಾಯಿಸಿದ್ದಾರೆ.

- Advertisement -

ಆರ್ಥಿಕ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ತಲಾ 2 ಸಾವಿರ ರೂಪಾಯಿ ನೇರ ಬ್ಯಾಂಕಿಗೆ ವರ್ಗಾವಣೆ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದರು. ಲಾಕ್ ಡೌನ್ ನಿಂದಾಗಿ ಗೃಹ ಕಾರ್ಮಿಕರು ಮೆಕ್ಯಾನಿಕ್, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಚಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು, ಹಾಗೂ ಟೈಲರ್ ಗಳು ಮುಂತಾದ ಅಸಂಘಟಿತ ವಲಯದ ಕಾರ್ಮಿಕರು ತೀರಾ ಸಂಕಷ್ಟದಲ್ಲಿದ್ದಾರೆ. ಕಷ್ಟ ಪಟ್ಟು ನಗರ ಪ್ರದೇಶಕ್ಕೆ ಹೋಗಿ ಹಣ ಖರ್ಚು ಮಾಡಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಹೆಚ್ಚಿನವರಿಗೆ ಹಣ ವರ್ಗಾವಣೆಯಾಗದಿರುವುದು ಖಂಡನೀಯ. ಜುಜುಬಿ 2 ಸಾವಿರ ಏನೂ ಸಾಕಾಗುವುದಿಲ್ಲ ಕನಿಷ್ಠ 10 ರೂಪಾಯಿಯಾದರೂ ಬಿಡುಗಡೆ ಮಾಡಬೇಕು. ಆದರೆ ಭರವಸೆ ನೀಡಿರುವ ಪರಿಹಾರ ಕೂಡಲೇ ಬಿಡುಗಡೆ ಮಾಡದೆ ಇದ್ದರೆ ಅರ್ಜಿದಾರರೊಂದಿಗೆ ಸೇರಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಅಬ್ದುಲ್ ಹನ್ನಾನ್ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

Join Whatsapp