ಕಾಣಿಯೂರಿನಲ್ಲಿ ಜವಳಿ ವ್ಯಾಪಾರಿಗಳ ಮೇಲೆ ಮಾರಣಾಂತಿಕ ಗುಂಪು ಹಲ್ಲೆ: ಘಟನೆಯನ್ನು ಗಂಭೀರವಾಗಿ ಪರಿಗಣಿಸಲು ಎಸ್ ಡಿಪಿಐ ಆಗ್ರಹ

Prasthutha|

ಸುಳ್ಯ: ಕಡಬ ತಾಲೂಕಿನ ಕಾಣಿಯೂರು ಸಮೀಪದ ದೋಳ್ಪಾಡಿ ಬಳಿ ಕಾರಿನಲ್ಲಿ ಜವಳಿ ವ್ಯಾಪಾರ ನಡೆಸುತ್ತಿದ್ದ ಇಬ್ಬರು ಯುವಕರ ಮೇಲೆ ಸಂಘಪರಿವಾರದ ಗುಂಪು ವ್ಯಾಪಾರಕ್ಕೆ ತಡೆಯೊಡ್ಡಿ ಎರಡು ತಾಸುಗಳ ಕಾಲ ಗಂಭೀರವಾಗಿ ಮಾರಣಾಂತಿಕ ಹಲ್ಲೆ ನಡೆಸಿ ಕಾರಿಗೆ ಹಾನಿಗೊಳಿಸಿದ ಅಮಾನವೀಯ ಘಟನೆಯನ್ನು ಎಸ್ ಡಿಪಿಐ ಸುಳ್ಯ ವಿಧಾನ ಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಇಕ್ಬಾಲ್ ಬೆಳ್ಳಾರೆ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

- Advertisement -

ಹಲವಾರು ವರ್ಷಗಳಿಂದ  ಜವಳಿ ವ್ಯಾಪಾರ ನಡೆಸುತ್ತಿರುವ ಯುವಕರು ದಕ್ಷಿಣ ಕನ್ನಡ ಜಿಲ್ಲೆಯವರೇ ಆಗಿದ್ದಾರೆ. ಆದರೆ ವ್ಯಾಪಾರಿಗಳು ಮುಸ್ಲಿಮರೆಂಬ ಕಾರಣಕ್ಕೆ ಬಿಜೆಪಿಯ ಕಾರ್ಯಕರ್ತರು ಇವರ ಮೇಲೆ  ಮಾರಣಾಂತಿಕ ಗುಂಪು ಹಲ್ಲೆ ನಡೆಸಿ ನಂತರ ಮಹಿಳೆಯ ಮೇಲೆ ಕೈ ಹಾಕಿದ್ದಾರೆ ಎಂಬ ಕಟ್ಟು ಕಥೆಗಳನ್ನು ಕಟ್ಟಿ ಆರೋಪಿಗಳು ಸುರಕ್ಷಿತರಾಗಿ ಹಲ್ಲೆಗೊಳಗಾದವರ ಮೇಲೆಯೇ ಪ್ರಕರಣ ದಾಖಲಾಗಿರುವುದು ಖೇದಕರ ಎಂದು ಅವರು ತಿಳಿಸಿದ್ದಾರೆ.

ಆದುದರಿಂದ ಪೊಲೀಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇವರ ಕಟ್ಟು ಕಥೆಯನ್ನು ಭೇದಿಸಿ ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.



Join Whatsapp