6ನೇ ವೇತನ ಆಯೋಗದ ಶಿಫಾರಸ್ಸಿನಂತೆ ಸಾರಿಗೆ ನೌಕರರಿಗೆ ವೇತನ ಜಾರಿ ಮಾಡಲು ಎಸ್.ಡಿ.ಪಿ.ಐ ಆಗ್ರಹ

Prasthutha|

ಬೆಂಗಳೂರು, ಏ-5: ಸಾರಿಗೆ ನೌಕರರು ತಮ್ಮ ಹಲವಾರು ಬೇಡಿಕೆಗಳನ್ನು ಮುಂದಿಟ್ಟು 3 ತಿಂಗಳುಗಳ ಹಿಂದೆ ಪ್ರತಿಭಟನೆ ನಡೆಸಿದ್ದರು. ಇದರಲ್ಲಿ 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ಸಾರಿಗೆ ನೌಕರರಿಗೂ ವೇತನ ನೀಡಬೇಕು ಹಾಗೂ ಸರ್ಕಾರಿ ನೌಕರರಿಗಿರುವ ಸಾಮಾನ ಸವಲತ್ತುಗಳನ್ನು ನೀಡಬೇಕು ಎಂಬ ಬೇಡಿಕೆ ಪ್ರಮುಖವಾಗಿತ್ತು.

- Advertisement -

ಆದರೆ ಸರ್ಕಾರ ಈವರೆಗೂ ಸಾರಿಗೆ ನೌಕರರ ಈ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿಲ್ಲ. ಇದರ ವಿರುದ್ಧ ಸಾರಿಗೆ ನೌಕರರು ಎಪ್ರಿಲ್ 7ರಿಂದ ಮತ್ತೊಮ್ಮೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ಈ ಮುಷ್ಕರದಿಂದ ಜನಸಾಮಾನ್ಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಲಿದೆ. ಆದ್ದರಿಂದ ಸರ್ಕಾರ ತಕ್ಷಣ ಸಾರಿಗೆ ನೌಕರರಿಗೆ ಈ ಹಿಂದೆ ಲಿಖಿತವಾಗಿ ಭರವಸೆ ನೀಡಿದ್ದ ರೀತಿಯಲ್ಲಿ ಅವರ ಎಲ್ಲಾ ನ್ಯಾಯಯುತ ಬೇಡಿಕೆಗಳನ್ನು ಈಡೇರಿಕೆಗೆ ಕ್ರಮವಹಿಸಬೇಕು ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಆಗ್ರಹಿಸಿದ್ದಾರೆ

Join Whatsapp