ಅವೈಜ್ಞಾನಿಕ, ಅಸಂವಿಧಾನಿಕ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೂಡಲೇ ವಾಪಸು ಪಡೆಯಬೇಕು: ಎಸ್.ಡಿ.ಪಿ.ಐ

Prasthutha|

ಬೆಂಗಳೂರು: ರಾಜ್ಯದಲ್ಲಿ ತರಾತುರಿಯಲ್ಲಿ ಯಾವುದೇ ಚರ್ಚೆಗಳಿಲ್ಲದೆ ಜಾರಿಗೊಳಿಸಲು ಉದ್ದೇಶಿಸಿರುವ ಅಸಂವಿಧಾನಿಕ, ಅವೈಜ್ಞಾನಿಕ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿಧಾನಸಭಾ ಅಧಿವೇಶನದಲ್ಲಿ ಮುಕ್ತವಾಗಿ ಚರ್ಚಿಸಿ ಹಿಂಪಡೆಯಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಉಪಾಧ್ಯಕ್ಷ ಅಡ್ವೊಕೇಟ್ ಮಜೀದ್ ಖಾನ್ ಒತ್ತಾಯಿಸಿದ್ದಾರೆ.

- Advertisement -


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ನೀತಿಯು ಕನ್ನಡ ವಿರೋಧಿಯಾಗಿದ್ದು, ಅಂಗನವಾಡಿ ವ್ಯವಸ್ಥೆಯನ್ನೇ ನಾಶ ಮಾಡಲು ದಾರಿಮಾಡಿಕೊಡುತ್ತದೆ. ಬಡ, ಅಲ್ಪಸಂಖ್ಯಾತ, ದಲಿತ, ಹಿಂದುಳಿದ ವರ್ಗಗಳ ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹಾಗೂ ಶಿಕ್ಷಣವನ್ನು ಕೇಂದ್ರೀಕರಿಸುವ ಮೂಲಕ ಖಾಸಗೀಕರಣ ಹಾಗೂ ಕೇಸರೀಕರಣಗೊಳಿಸುವ ಹುನ್ನಾರವನ್ನು ಹೊಂದಿದೆ ಎಂದು ಅವರು ಆರೋಪಿಸಿದರು.


ಎನ್ ಇಪಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುತ್ತಿದೆ. ಮಾತ್ರವಲ್ಲ ಮೌಢ್ಯತೆಗೆ ಒತ್ತು ನೀಡುತ್ತದೆ. ಹಲವಾರು ಶಿಕ್ಷಣ ತಜ್ಞರು ನೀಡಿದ ಯಾವ ಅಭಿಪ್ರಾಯಗಳನ್ನು ಸಹ ಪರಿಗಣಿಸಲಿಲ್ಲ. ಒಂದು ವೇಳೆ ರಾಜ್ಯ ಸರಕಾರ ತನ್ನ ಸರ್ವಾಧಿಕಾರ ಹಾಗೂ ಹಠಮಾರಿ ಧೋರಣೆಯೊಂದಿಗೆ ಈ ನೀತಿಯನ್ನು ವಾಪಸ್ ಪಡೆಯದೇ ಇದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಮಜೀದ್ ಖಾನ್ ಎಚ್ಚರಿಕೆ ನೀಡಿದರು.

- Advertisement -


ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಮಿತಿ ಸದಸ್ಯರಾದ ಭಾಸ್ಕರ್ ಪ್ರಸಾದ್, ಬೆಂಗಳೂರು ಜಿಲ್ಲಾಧ್ಯಕ್ಷರಾದ ಫಯಾಜ್ ಅಹ್ಮದ್, ಕಾರ್ಯದರ್ಶಿ ಮೆಹಬೂಬ್ ಉಪಸ್ಥಿತರಿದ್ದರು.

Join Whatsapp