Home ಕರಾವಳಿ ಫಾಝಿಲ್, ಮಸೂದ್ ಪ್ರಕರಣದಲ್ಲಿ ಸರ್ಕಾರದ ತಾರತಮ್ಯ ನೀತಿ ವಿರೋಧಿಸಿ ಇಂದು ನಡೆಯುವ ಬೃಹತ್ ಪ್ರತಿಭಟನೆಗೆ SDPI...

ಫಾಝಿಲ್, ಮಸೂದ್ ಪ್ರಕರಣದಲ್ಲಿ ಸರ್ಕಾರದ ತಾರತಮ್ಯ ನೀತಿ ವಿರೋಧಿಸಿ ಇಂದು ನಡೆಯುವ ಬೃಹತ್ ಪ್ರತಿಭಟನೆಗೆ SDPI ಬೆಂಬಲ

ಮಂಗಳೂರು: ಬೆಳ್ಳಾರೆಯ ಮಸೂದ್ ಮತ್ತು ಸುರತ್ಕಲ್ ನ ಫಾಝಿಲ್ ಹತ್ಯೆ ಖಂಡಿಸಿ ಹಾಗೂ ಸರ್ಕಾರ ನಡೆದುಕೊಂಡ ತಾರತಮ್ಯ ನೀತಿಯನ್ನು ವಿರೋಧಿಸಿ ಸುರತ್ಕಲ್ ನ ಮುಸ್ಲಿಂ ಐಕ್ಯತಾ ವೇದಿಕೆ ಇಂದು (ಶುಕ್ರವಾರ) ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಗೆ ಎಸ್ ಡಿಪಿಐ ದ.ಕ ಜಿಲ್ಲಾ ಸಮಿತಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ ಎಂದು ಎಸ್ಡಿಪಿಐ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಶುಕ್ರವಾರ ಸಂಜೆ 4 ಗಂಟೆಗೆ ಮಂಗಳೂರಿನ ಕ್ಲಾಕ್ ಟವರ್ ಮುಂಭಾಗದಲ್ಲಿ ಪ್ರಜಾಸತ್ತಾತ್ಮಕವಾಗಿ ನಡೆಯುವ ಪ್ರತಿಭಟನೆಯಲ್ಲಿ ಜಾತಿ ಭೇದ ಮರೆತು ಎಲ್ಲರೂ ಭಾಗವಹಿಸಿ ಹೋರಾಟವನ್ನು ಯಶಸ್ವಿ ಗೊಳಿಸಬೇಕೆಂದು ಅವರು ವಿನಂತಿಸಿದ್ದಾರೆ.

Join Whatsapp
Exit mobile version