ಬೆಳ್ಳಾರೆಯಲ್ಲಿ ಎಸ್ ಡಿ ಪಿ ಐ ಸಂಸ್ಥಾಪನಾ ದಿನಾಚರಣೆ

Prasthutha|

ಬೆಳ್ಳಾರೆ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ಗ್ರಾಮ ಸಮಿತಿ ವತಿಯಿಂದ ಪಕ್ಷದ 13 ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಹಾಗೂ ಬೆಳ್ಳಾರೆ ಅಂಗನವಾಡಿ ಕೇಂದ್ರದ ಬಳಿ  ಶ್ರಮದಾನ ಕಾರ್ಯಕ್ರಮವು ನಡೆಯಿತು.

- Advertisement -

ಬೆಳ್ಳಾರೆ ಗ್ರಾಮ ಸಮಿತಿ ಅಧ್ಯಕ್ಷ ಶಹೀದ್ ಎಂ ಧ್ವಜಾರೋಹಣ ನೆರವೇರಿಸಿದರು. ಎಸ್ ಡಿ ಪಿ ಐ ರಾಜ್ಯ ಕಾರ್ಯದರ್ಶಿ ಜನಾಬ್ ಶಾಫಿ ಬೆಳ್ಳಾರೆ ಸಂದೇಶ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ  ಎಸ್ ಡಿ ಪಿ ಐ ಸುಳ್ಯ ವಿಧಾನಸಭಾ ಸಮಿತಿ ಅಧ್ಯಕ್ಷ ಇಕ್ಬಾಲ್ ಬೆಳ್ಳಾರೆ, ಕೋಶಾಧಿಕಾರಿ ಮಮ್ಮಾಲಿ ಹಾಜಿ, ಬೆಳ್ಳಾರೆ ಬ್ಲಾಕ್ ಅಧ್ಯಕ್ಷ ಹಮೀದ್ ಮರಕ್ಕಡ, ಕಾರ್ಯದರ್ಶಿ ಯು.ಎಚ್.ಮೊಯಿದಿನ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ಳಾರೆ ವಲಯ ಅಧ್ಯಕ್ಷ ಶಫೀಕ್ ಬೆಳ್ಳಾರೆ, ಎಸ್ ಡಿ ಪಿ ಐ ಗ್ರಾಮ ಸಮಿತಿ, ಬೂತ್ ಸಮಿತಿ ಪದಾಧಿಕಾರಿಗಳು, ಕಾರ್ಯಕರ್ತರು  ಉಪಸ್ಥಿತರಿದ್ದರು. ಸಭೆಗೆ ಗ್ರಾಮ ಸಮಿತಿ ಕಾರ್ಯದರ್ಶಿ ಜಾಬಿರ್ ಸಿ.ಎಂ ಸ್ವಾಗತಿಸಿ ಫೈಝಲ್ ಎ.ಆರ್ ವಂದಿಸಿದರು.



Join Whatsapp