ಎಸ್ ಡಿಪಿಐ ಸಂಸ್ಥಾಪನಾ ದಿನಾಚರಣೆ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Prasthutha|

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ 13 ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಗುರುಪುರ ಬ್ಲಾಕ್ ಸಮಿತಿಯ ವತಿಯಿಂದ 2021-2022 ನೇ ಸಾಲಿನ SSLC ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುವ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರನ್ನು ಗುರುತಿಸಿ ಸನ್ಮಾನ ಕಾರ್ಯಕ್ರಮವು  ಗುರುಪುರ ಕೈಕಂಬದ ಪ್ರೀಮಿಯರ್ ಸಭಾಂಗಣದಲ್ಲಿ ನಡೆಯಿತು.

- Advertisement -

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು SDPI ರಾಜ್ಯ ಸಮಿತಿ ಸದಸ್ಯರು ಜಲೀಲ್ ಕೆ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ SDPI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯ ಅಶ್ರಫ್ ಕೆ.ಸಿ.ರೋಡ್ ವಿದ್ಯಾರ್ಥಿಗಳ ಸಾಧನೆಯನ್ನು ಪ್ರಶಂಸಿಸಿ ಶುಭ ಕೋರಿದರು.

ವೇದಿಕೆಯಲ್ಲಿ SDPI ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಯಾಸಿನ್ ಅರ್ಕುಲ, ಕಾರ್ಯದರ್ಶಿ ಅಶ್ರಫ್ ಅಡ್ಡೂರು, ಹಾಗೂ PFI ಗುರುಪುರ ಕೈಕಂಬ ಡಿವಿಷನ್ ಅಧ್ಯಕ್ಷರು ಶೆರೀಫ್ ತೋಡಾರು, SDPI ಗುರುಪುರ ಬ್ಲಾಕ್ ಅಧ್ಯಕ್ಷರು ಮುಝಮ್ಮಿಲ್ ನೂಯಿ, ಕಾರ್ಯದರ್ಶಿ ಇಮ್ತಿಯಾಝ್ ಅಡ್ಡೂರು ಹಾಗೂ ಗುರುಪುರ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ದಿಲ್ಶಾದ್ ಮತ್ತು ಗುರುಪುರ ಗ್ರಾಮ ಪಂಚಾಯತ್ ಸದಸ್ಯರಾದ ಶಾಹಿಕ್, ಮನ್ಸೂರ್,ಅಶ್ರಫ್ ಉಪಸ್ಥಿತರಿದ್ದರು.

- Advertisement -

  ಗುರುಪುರ ಕೈಕಂಬ ಬ್ಲಾಕ್ ವ್ಯಾಪ್ತಿಯ ಒಟ್ಟು 8 ಶಾಲೆಯ ವಿದ್ಯಾರ್ಥಿಗಳಿಗೆ ವೇದಿಕೆಯಲ್ಲಿ ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

Join Whatsapp