ಜನಾಗ್ರಹ ಆಂದೋಲನ ವತಿಯಿಂದ ನಡೆದ ಪ್ರತಿಭಟನೆಯಲ್ಲಿ SDPI ಭಾಗಿ

Prasthutha|

ಮಂಗಳೂರು : ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಗೆ ಉಚಿತ ಚಿಕಿತ್ಸೆ, ಎಲ್ಲಾ ಬಿಪಿಎಲ್ ಪಡಿತರ ಕಾರ್ಡುದಾರರಿಗೆ ಉಚಿತ ಅಕ್ಕಿಯೊಂದಿಗೆ ಎಣ್ಣೆ,ಬೇಳೆಕಾಳು ಒಳಗೊಂಡ ಸಮಗ್ರ ದಿನಸಿ ಕಿಟ್,ಮಾಸಿಕ 5000 ರೂಪಾಯಿ ನೆರವು, ಕೋವಿಡ್ ಸಾವಿನಿಂದ ಅನಾಥಗೊಂಡ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ, ಚಾಮರಾಜನಗರ ಸೇರಿದಂತೆ ವಿವಿಧ ಭಾಗಗಳಲ್ಲಿ ಸರಕಾರದ ವೈಫಲ್ಯದಿಂದ ಸಾವಿಗೀಡಾದ ಜನರ ಕುಟುಂಬಕ್ಕೆ ಹತ್ತು ಲಕ್ಷ ರೂಪಾಯಿ ಪರಿಹಾರ ಸೇರಿದಂತೆ ವಿವಿಧ ಹಕ್ಕೊತ್ತಾಯ ಗಳನ್ನು ಸರಕಾರದ ಮುಂದೆ ಮಂಡಿಸುವ ಸಲುವಾಗಿ ನಾವೂ ಬದುಕಬೇಕು ಎಂಬ ಘೋಷಣೆಯೊಂದಿಗೆ ರಾಜ್ಯಾದ್ಯಂತ ಜನಾಗ್ರಹ ಆಂದೋಲನದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸೋಷಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ನಾಯಕರು, ಕಾರ್ಯಕರ್ತರು, ಸದಸ್ಯರು ,ಚುನಾಯಿತ ಪ್ರತಿನಿಧಿಗಳು ಸಕ್ರಿಯವಾಗಿ ಬಾಗವಹಿಸುವ ಮೂಲಕ ಪ್ರತಿಭಟನೆಯನ್ನು ಯಶಸ್ವಿಗೊಳಿಸಿದರು .

- Advertisement -

ಜಿಲ್ಲೆಯ ವಿವಿಧ ಕ್ಷೇತ್ರ ವ್ಯಾಪ್ತಿಯ 78 ಕಡೆಗಳಲ್ಲಿ ಸಾಮಾಜಿಕ ಅಂತರದೊಂದಿಗೆ,ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಖಾಲಿತಟ್ಟೆ,ಖಾಲಿಚೀಲ ದೊಂದಿಗೆ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿಕೊಂಡು ಪ್ರತಿಭಟನೆ ನಡೆಸಿದರು

ಈ ಆಂದೋಲನದಲ್ಲಿ ಪಕ್ಷದ ರಾಷ್ಟ್ರೀಯ, ರಾಜ್ಯ, ಜಿಲ್ಲಾ, ಹಾಗೂ ಕ್ಷೇತ್ರ ವ್ಯಾಪ್ತಿಯ ನಾಯಕರು ಅಲ್ಲದೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಕಾರ್ಯಕರ್ತರು ತಮ್ಮ ಮನೆ ಮುಂಭಾಗದ ಗಲ್ಲಿ,ಬೀದಿಗಳಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು ಎಂದು ಎಸ್ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp