SDPI ಕಣ್ಣೂರು ವಾರ್ಡ್ ಸಮಿತಿ ಸಮಾಗಮ -2023

Prasthutha|

ಕಣ್ಣೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ದ.ಕ ಜಿಲ್ಲಾ ಸಮಿತಿ ಹಮ್ಮಿಕೊಂಡಿರುವ ಬ್ಲಾಕ್ ಸಮಾಗಮ – 2023 ಕಣ್ಣೂರು ವಾರ್ಡ್ ಸಮಿತಿ ಅಧ್ಯಕ್ಷರಾದ ಇಕ್ಬಾಲ್ ರವರ ನೇತೃತ್ವದಲ್ಲಿ ಕಣ್ಣೂರು ಕಚೇರಿಯಲ್ಲಿ ನಡೆಯಿತು.

- Advertisement -

ಮುಖ್ಯ ಅಥಿತಿಗಳಾಗಿ ದ.ಕ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ಜಿಲ್ಲಾ ಸಮಿತಿ ಸದಸ್ಯರಾದ ನಝೀರ್ 10th ಮೈಲು, ದಕ್ಷಿಣ ವಿಧಾನಸಭಾ ಅಧ್ಯಕ್ಷರಾದ ಅಕ್ಬರ್ ರಾಝಿ ಮುಂತಾದವರು ಉಪಸ್ಥಿತರಿದ್ದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರ್ ಪಕ್ಷದ ಕಾರ್ಯಚಟುವಟಿಕೆಗಳನ್ನು ಹಾಗೂ ಮುಂದಿನ ಕಾರ್ಯ ಯೋಜನೆಗಳನ್ನು ವಿವರಿಸಿ, ಎಲ್ಲಾ ಸ್ಥರದ ಪದಾಧಿಕಾರಿಗಳು ಹಾಗೂ ನಾಯಕರು ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸಿ ಮತ್ತಷ್ಟು ಬಲಿಷ್ಠಗೊಳಿಸುವಂತೆ ಕರೆ ನೀಡಿದರು. ಜಿಲ್ಲಾ ಸಮಿತಿ ಸದಸ್ಯರಾದ ನಝೀರ್ 10th ಮೈಲು ಸಮಾರೋಪ ಭಾಷಣಗೈದರು.

- Advertisement -

ಸಭೆಯಲ್ಲಿ ಕಣ್ಣೂರು ವಾರ್ಡ್ ಸಮಿತಿ ಸದಸ್ಯರು, ಬೂತ್ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇಕ್ಬಾಲ್ ಕಣ್ಣೂರು ಸ್ಥಾಗತಿಸಿ, ಶರೀಫ್ ಕರಾವಳಿ ಧನ್ಯವಾದಗೈದರು.

Join Whatsapp