ದ.ಕ ಜಿಲ್ಲಾ ನಾಯಕರ ಉಪಸ್ಥಿತಿಯಲ್ಲಿ SDPI ಕೊಳ್ನಾಡು ಬ್ಲಾಕ್ ಸಮಾಗಮ-2023

Prasthutha|

ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಸಮಿತಿ ಕೈಗೊಂಡ ಅಭಿಯಾನವಾದ ಬ್ಲಾಕ್ ಸಮಾಗಮ ಕೊಳ್ನಾಡು ಬ್ಲಾಕ್ ಅಧ್ಯಕ್ಷರಾದ ಹೈದರ್ ಅಲಿ ಕಡಂಬು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

- Advertisement -

ಮುಖ್ಯ ಅತಿಥಿಗಳಾಗಿ ಎಸ್‌ಡಿಪಿಐ ದ.ಕ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು, ಜಿಲ್ಲಾ ಸಮಿತಿ ಸದಸ್ಯರಾದ ನಝೀರ್ ಕುಂಜತ್ಕಲ, ಎಸ್ ಡಿ ಪಿ ಐ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಮೂನಿಷ್ ಆಲಿ, ಕಾರ್ಯದರ್ಶಿ ಕಲಂದರ್ ಪರ್ತಿಪ್ಪಾಡಿ, ಕೋಶಾಧಿಕಾರಿ ಪೈಝಲ್ ಮಂಚಿ ಮತ್ತು ಕ್ಷೇತ್ರ ಸಮಿತಿ ಸದಸ್ಯರಾದ ಬಶೀರ್ ಕೊಳ್ನಾಡು ಆಗಮಿಸಿದ್ದರು.

ದ. ಕ. ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಪಕ್ಷದ ಕಾರ್ಯ ಚಟುವಟಿಕೆ ಮತ್ತು ಮುಂದಿನ ಯೋಜನೆಗಳ ಬಗ್ಗೆ ವಿವರಿಸಿ ಮಾತನಾಡಿ, ಎಲ್ಲಾ  ಪದಾಧಿಕಾರಿಗಳು, ನಾಯಕರು ಪಕ್ಷದ ಪ್ರತಿಯೊಂದು ಚಟುವಟಿಕೆಗಳಲ್ಲಿ ಭಾಗವಹಿಸಿ ಪಕ್ಷವನ್ನು ಇನ್ನಷ್ಟು ಬಲಿಷ್ಟಗೊಳಿಸಲು ಕರೆ ನೀಡಿದರು. ಜಿಲ್ಲಾ  ಕಾರ್ಯದರ್ಶಿ ಶಾಕಿರ್ ಅಳಕೆಮಜಲು ಅವರು ಸಮಾರೋಪ ಭಾಷಣ ಮಾಡಿದರು.

- Advertisement -

ಈ ಸಂದರ್ಭದಲ್ಲಿ ಬ್ಲಾಕ್ ಸಮಿತಿ ಪದಾಧಿಕಾರಿಗಳು ಮತ್ತು ಬೂತ್ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.  ಕೊಳ್ನಾಡು ಬ್ಲಾಕ್ ಸಮಿತಿ ಅಧ್ಯಕ್ಷರಾದ ಹೈದರ್ ಅಲಿ ಕಡಂಬು ಸ್ವಾಗತಿಸಿ, ಕಾರ್ಯದರ್ಶಿ ಹಕೀಮ್ ಕರೈ ಧನ್ಯವಾದಗೈದರು.