ದ.ಕ ಜಿಲ್ಲಾ ನಾಯಕರ ಉಪಸ್ಥಿತಿಯಲ್ಲಿ ಎಸ್‌ಡಿಪಿಐ ಕುವೆಟ್ಟು ಬ್ಲಾಕ್ ಸಮಾಗಮ-2023

Prasthutha|

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಸಮಿತಿ ಕೈಗೊಂಡ ಅಭಿಯಾನವಾದ ಬ್ಲಾಕ್ ಸಮಾಗಮದ ಅಂಗವಾಗಿ ಎಸ್‌ಡಿಪಿಐ ಜಿಲ್ಲಾ ನಿಯೋಗದ ತಂಡ ಕುವೆಟ್ಟು ಬ್ಲಾಕ್ ಸಮಿತಿ ಹಾಗೂ ಬೂತ್ ಸಮಿತಿಗಳ ಪದಾಧಿಕಾರಿಗಳನ್ನು ಭೇಟಿಯಾಗಿ ಮುಕ್ತ ಚರ್ಚೆಯನ್ನು ನಡೆಸಿದರು.

- Advertisement -


ಮುಖ್ಯ ಅತಿಥಿಗಳಾಗಿ ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿಗಳಾದ ಅಲ್ಫೋನ್ಸ್ ಫ್ರಾಂಕೋ, ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು, ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಆಗಮಿಸಿದ್ದರು.


ರಾಷ್ಟ್ರೀಯ ಕಾರ್ಯದರ್ಶಿಗಳಾದ ಅಲ್ಫೋನ್ಸ್ ಫ್ರಾಂಕೋ ಪಕ್ಷದ ಕಾರ್ಯ ಚಟುವಟಿಕೆ ಮತ್ತು ಮುಂದಿನ ಯೋಜನೆಗಳ ಬಗ್ಗೆ ವಿವರಿಸಿ ಮಾತನಾಡಿ, ಎಲ್ಲಾ ಪದಾಧಿಕಾರಿಗಳು, ನಾಯಕರು ಪಕ್ಷದ ಪ್ರತಿಯೊಂದು ಚಟುವಟಿಕೆಗಳಲ್ಲಿ ಭಾಗವಹಿಸಿ ಪಕ್ಷವನ್ನು ಇನ್ನಷ್ಟು ಬಲಿಷ್ಟಗೊಳಿಸಲು ಕರೆ ನೀಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು ಅವರು ಸಮಾರೋಪ ಭಾಷಣ ಮಾಡಿದರು.

- Advertisement -


ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಅವರು ಪಕ್ಷದ ಮುಂದಿನ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಕಟ್ಟೆ, ಕಾರ್ಯದರ್ಶಿಗಳಾದ ಅಶ್ಫಾಕ್ ಪುಂಜಾಲಕಟ್ಟೆ, ನಿಸಾರ್ ಕುದ್ರಡ್ಕ, ಕ್ಷೇತ್ರ ಸಮಿತಿ ಪದಾಧಿಕಾರಿಗಳು, ಕುವೆಟ್ಟು ಬ್ಲಾಕ್ ಸಮಿತಿ ಪದಾಧಿಕಾರಿಗಳು, ಗ್ರಾಮ ಸಮಿತಿ ಪದಾಧಿಕಾರಿಗಳು ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಕುವೆಟ್ಟು ಬ್ಲಾಕ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ರೌಫ್ ಪುಂಜಾಲಕಟ್ಟೆ ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಆಸೀಫ್ ಬಂಗೇರುಕಟ್ಟೆ ಧನ್ಯವಾದಗೈದರು.