Home ಕರಾವಳಿ SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಸವಣೂರಿನಲ್ಲಿ ‘ಸಾಮಾಜಿಕ ನ್ಯಾಯ ದಿನಾಚರಣೆ’

SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಸವಣೂರಿನಲ್ಲಿ ‘ಸಾಮಾಜಿಕ ನ್ಯಾಯ ದಿನಾಚರಣೆ’

0

ಸವಣೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ 134 ನೇ ಅಂಬೇಡ್ಕರ್ ಜಯಂತಿ ಅಂಗವಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಸವಣೂರಿನಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಇನಾಸ್ ರೋಡ್ರಿಗಸ್‌ರವರ ಸಭಾಧ್ಯಕ್ಷತೆಯಲ್ಲಿ “ಸರ್ವಾಧಿಕಾರ ಅಳಿಯಲಿ, ಸಂವಿಧಾನ ಉಳಿಯಲಿ” ಎಂಬ ಘೋಷಣೆಯೊಂದಿಗೆ ಸಾಮಾಜಿಕ ನ್ಯಾಯ ದಿನಾಚರಣೆಯನ್ನು ಆಚರಿಸಲಾಯಿತು.

ಪಕ್ಷದ ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಅಲೆಕ್ಕಾಡಿ ಸ್ವಾಗತಿಸಿದರು.
ಸಭೆಯನ್ನು ಉದ್ದೇಶಿಸಿ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಇನಾಸ್ ರೋಡ್ರಿಗಸ್ ಮಾತನಾಡಿ, ಸದಾ ದೀನರ ಪರವಾಗಿದ್ದ ಅಂಬೇಡ್ಕರ್‌ರವರ ಜೀವನಶೈಲಿ, ಹೋರಾಟದ ಕುರಿತು ಸವಿಸ್ತಾರವಾಗಿ ವಿವರಿಸಿದರು‌.

ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪುತ್ತೂರು, ಜಿಲ್ಲಾ ಕಾರ್ಯದರ್ಶಿ ನವಾಝ್ ಶರೀಫ್ ಕಟ್ಟೆ, ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ದಲಿತ ಮುಖಂಡ, ಎಸ್‌ಡಿಪಿಐ ಜಿಲ್ಲಾ ಸಮಿತಿ ಸದಸ್ಯರಾದ ಆನಂದ ಮಿತ್ತಬೈಲ್, ಪುತ್ತೂರು ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷರಾದ ಹಮೀದ್ ಸಾಲ್ಮರ, ಸುಳ್ಯ ವಿಧಾನಸಭಾ ಉಪಾಧ್ಯಕ್ಷರಾದ ವಿಕ್ಟರ್ ಮಾರ್ಟಿಸ್, ಸವಣೂರು ಗ್ರಾಮ ಪಂಚಾಯತ್ ಸದಸ್ಯರಾದ ರಫೀಕ್ ಎಂ ಎ ಸಾಮಾಜಿಕ ನ್ಯಾಯ ದಿನಾಚರಣೆಯ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಎಸ್ ಡಿ ಪಿ ಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಮಿರಾಝ್ ಸುಳ್ಯ, ಸವಣೂರು ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಚೆನ್ನು, ಎಸ್ ಡಿ ಪಿ ಐ ಸುಳ್ಯ ಬ್ಲಾಕ್ ಸಮಿತಿಯ ಅಧ್ಯಕ್ಷರಾದ ಸಿದ್ದೀಕ್ ಸಿ.ಎ, ದಲಿತ ಮುಖಂಡರಾದ ಗಣೇಶ್ ಗುರಿಯಾನ, ಎಲ್ ಐ ಸಿ ಪ್ರತಿನಿಧಿ ಶೇಖರ ಸವಣೂರು, ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯರು ಹಾಗೂ ದಲಿತ ಮುಖಂಡರಾದ ವಿಶ್ವನಾಥ ಪುಂಚತ್ತಾರು, ಸವಣೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಶ್ರೀಮತಿ ಮೀನಾಕ್ಷಿ, ಸಜಿಪ ನಡು ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಸುಶೀಲ ಆನಂದ ಹಾಗೂ ಪಕ್ಷದ ಸ್ಥಳೀಯ ನಾಯಕರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ರಿಯಾಝ್ ಬಳಕ್ಕ ನಿರೂಪಿಸಿ, ರಝಾಕ್ ಕೆನರಾ ಧನ್ಯವಾದಗೈದರು.

NO COMMENTS

LEAVE A REPLY

Please enter your comment!
Please enter your name here

Exit mobile version