ಸುರತ್ಕಲ್ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಫೆಬ್ರವರಿ 23 ರಂದು MJM ಸಭಾಂಗಣ ಚೊಕ್ಕಬೆಟ್ಟುವಿನಲ್ಲಿ ಪಕ್ಷದ ಸಮಾವೇಶ ನಡೆಯಲಿದೆ.
ಸಮಾವೇಶದಲ್ಲಿ ಎಸ್ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ತುಂಬೆ, ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು, ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು, ವಿಮ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಶಾ ವಾಮಂಜೂರು ಹಾಗೂ ಎಸ್ಡಿಪಿಐ ಮಂಗಳೂರು ಉತ್ತರ ಕ್ಷೇತ್ರ ಅಧ್ಯಕ್ಷ ಉಸ್ಮಾನ್ ಗುರುಪುರ ಭಾಗವಹಿಸಲಿದ್ದಾರೆ.
ಪಕ್ಷದ ಕಾರ್ಯಕರ್ತರು, ಹಿತೈಷಿಗಳು, ಬೆಂಬಲಿಗರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು SDPI ಕ್ಷೇತ್ರ ಕಾರ್ಯದರ್ಶಿ ಅಝರ್ ಉಳಾಯಿಬೆಟ್ಟು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.