Home ಕರಾವಳಿ ದಿನೇಶ್ ಕನ್ಯಾಡಿಗೆ ನ್ಯಾಯಕ್ಕೆ ಆಗ್ರಹಿಸಿ SDPIನಿಂದ ಮಾ. 29 ರಂದು ಬೆಳ್ತಂಗಡಿಯಿಂದ ಮಂಗಳೂರಿಗೆ ಬೃಹತ್ ಜಾಥಾ

ದಿನೇಶ್ ಕನ್ಯಾಡಿಗೆ ನ್ಯಾಯಕ್ಕೆ ಆಗ್ರಹಿಸಿ SDPIನಿಂದ ಮಾ. 29 ರಂದು ಬೆಳ್ತಂಗಡಿಯಿಂದ ಮಂಗಳೂರಿಗೆ ಬೃಹತ್ ಜಾಥಾ

ಮಂಗಳೂರು: ಧರ್ಮಸ್ಥಳ ಸಮೀಪದ ಕನ್ಯಾಡಿಯಲ್ಲಿ ಇತ್ತೀಚೆಗೆ ಬಿಜೆಪಿ ಮುಖಂಡನಿಂದ ಹತ್ಯೆಯಾದ ದಲಿತ ಯುವಕ ದಿನೇಶ್ ಕನ್ಯಾಡಿಗೆ ಸೂಕ್ತ ಪರಿಹಾರ ಮತ್ತು ನ್ಯಾಯಕ್ಕಾಗಿ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಮಾರ್ಚ್ 29 ರಂದು ಬೆಳ್ತಂಗಡಿ ಯಿಂದ ಮಂಗಳೂರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಮಾರ್ಚ್ ಹದಿನೈದರಂದು ನಡೆಯಬೇಕಿದ್ದ ಪಾದಯಾತ್ರೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಮಾರ್ಚ್ 29ರಂದು ಬೆಳಿಗ್ಗೆ 9:30 ಕ್ಕೆ ಬೆಳ್ತಂಗಡಿಯ ಬಸ್ ನಿಲ್ದಾಣದ ಸಮೀಪ ಪಾದಯಾತ್ರೆಗೆ ಚಾಲನೆ ದೊರೆಯಲಿದ್ದು, ಸಂಜೆ 4:30 ಕ್ಕೆ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸಮಾಪ್ತಿಗೊಳ್ಳಲಿದೆ . ಈ ಜಾಥಾದಲ್ಲಿ ಪಕ್ಷದ ನಾಯಕರು ಮತ್ತು ದಲಿತ ಸಂಘಟನೆಗಳ ಮುಖಂಡರು ಬಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Join Whatsapp
Exit mobile version