Home ಟಾಪ್ ಸುದ್ದಿಗಳು ಆ. 27ರಂದು SDPI ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಆಂತರಿಕ ಚುನಾವಣೆ

ಆ. 27ರಂದು SDPI ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಆಂತರಿಕ ಚುನಾವಣೆ

ಬಜಪೆ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಆಂತರಿಕ ಚುನಾವಣೆ ಆಗಸ್ಟ್ 27 ಮಂಗಳವಾರ ಬಜಪೆ ಕಿನ್ನಿಪದವು ಇಸ್ತಿರಾ ಬ್ಯಾಂಕ್ವೆಟ್ ಹಾಲ್ ಸಭಾಂಗಣದಲ್ಲಿ ಬೆಳಿಗ್ಗೆ 10:30ಕ್ಕೆ ನಡೆಯಲಿದೆ.

 SDPI ಪಕ್ಷದ ಆಂತರಿಕ ಚುನಾವಣೆ ದೇಶದೆಲ್ಲೆಡೆ ನಡೆಯುತ್ತಿದ್ದು ಇದರ ಭಾಗವಾಗಿ ಕ್ಷೇತ್ರ ಸಮಿತಿಯ ಪ್ರತಿನಿಧಿ ಸಭೆ ಕಿನ್ನಿಪದವು ಇಸ್ತಿರಾ ಬಾಂಕ್ವೆಟ್ ಹಾಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಇರ್ಷಾದ್ ಹಳೆಯಂಗಡಿ ಯವರು ಅಧ್ಯಕ್ಷತೆ ವಹಿಸಲಿದ್ದಾರೆ. ಕ್ಷೇತ್ರ ಸಮಿತಿ ಕಾರ್ಯದರ್ಶಿ ತ್ರೈವಾರ್ಷಿಕ ವರದಿ ಮಂಡಿಸಲಿದ್ದಾರೆ.

  ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸೋ ಫ್ರಾಂಕೊ, ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲಾ ಜೋಕಟ್ಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅಶ್ರಫ್ ಅಡ್ಡೂರು, ಜಮಾಲ್ ಜೋಕಟ್ಟೆ, ಜಿಲ್ಲಾ ಕಾರ್ಯದರ್ಶಿ ಸುಹೈಲ್ ಖಾನ್, ಜಿಲ್ಲಾ ಸಮಿತಿ ಸದಸ್ಯರಾದ ಅಶ್ರಫ್ ತಲಪಾಡಿ, ಅಬೂಬಕರ್ ಮದ್ದ, ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಇಸ್ಮಾಯಿಲ್ ಇಂಜಿನಿಯರ್, ಕೋಶಾಧಿಕಾರಿ ಅಯ್ಯೂಬ್ ಸೂರಿಂಜೆ, ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯಾಧ್ಯಕ್ಷೆ ನಸೀಮಾ ಫಾತಿಮಾ, ರಾಜ್ಯ ಸಮಿತಿ ಸದಸ್ಯರಾದ ಝುಲೈಕಾ ಹಾಗು ಕ್ಷೇತ್ರ ಸಮಿತಿಯ ಪದಾಧಿಕಾರಿಗಳು, ಮೂಡುಬಿದಿರೆ ಬ್ಲಾಕ್, ಮುಲ್ಕಿ ಬ್ಲಾಕ್, ಬಜಪೆ ಪಟ್ಟಣ ಪಂಚಾಯತ್ ಸಮಿತಿ, ಜೋಕಟ್ಟೆ ಗ್ರಾಮ ಸಮಿತಿ, ಸೂರಿಂಜೆ ಗ್ರಾಮ ಸಮಿತಿಯ ಎಲ್ಲಾ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಕ್ಷೇತ್ರ ಸಮಿತಿಯ ಜೊತೆ ಕಾರ್ಯದರ್ಶಿ ಅಬೂಬಕರ್ ಸಿದ್ದೀಕ್ ಕಾರ್ನಾಡ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp
Exit mobile version