ದ.ಕ ಜಿಲ್ಲಾ ನಾಯಕರ ಉಪಸ್ಥಿತಿಯಲ್ಲಿ SDPI ಮುನ್ನೂರು ಬ್ಲಾಕ್ ಸಮಾಗಮ-2023

Prasthutha|

ಉಳ್ಳಾಲ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಸಮಿತಿ ಕೈಗೊಂಡ ಅಭಿಯಾನವಾದ ಬ್ಲಾಕ್ ಸಮಾಗಮ ಮುನ್ನೂರು ಬ್ಲಾಕ್ ಅಧ್ಯಕ್ಷರಾದ ಕಮರ್ ಮಲಾರ್ ರವರ ಅಧ್ಯಕ್ಷತೆಯಲ್ಲಿ ಪಕ್ಷದ ಕಛೇರಿ ದೇರಳಕಟ್ಟೆಯಲ್ಲಿ ನಡೆಯಿತು.

- Advertisement -

ಮುಖ್ಯ ಅತಿಥಿಗಳಾಗಿ ಎಸ್‌ಡಿಪಿಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ನವಾಝ್ ಉಳ್ಳಾಲ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಮಂಗಳೂರು ವಿಧಾನ ಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಉಭೈದ್ ಅಮ್ಮೆಂಬಳ, ಕ್ಷೇತ್ರ ಸಮಿತಿ ಸದಸ್ಯರಾದ ಅಶ್ರಫ್ ಮಂಚಿ ಆಗಮಿಸಿದ್ದರು.

ರಾಜ್ಯ ಸಮಿತಿ ಸದಸ್ಯರಾದ ನವಾಝ್ ಉಳ್ಲಾಲರವರು ಸಮಾಗಮ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಪಕ್ಷದ ಕಾರ್ಯ ಚಟುವಟಿಕೆ ಮತ್ತು ಮುಂದಿನ ಯೋಜನೆಗಳ ಬಗ್ಗೆ ವಿವರಿಸಿ ಮಾತನಾಡಿ, ಎಲ್ಲಾ ಪದಾಧಿಕಾರಿಗಳು, ನಾಯಕರು ಪಕ್ಷದ ಪ್ರತಿಯೊಂದು ಚಟುವಟಿಕೆಗಳಲ್ಲಿ ಭಾಗವಹಿಸಿ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಲು ಕರೆ ನೀಡಿದರು. ಕ್ಷೇತ್ರ ಸಮಿತಿ ಕಾರ್ಯದರ್ಶಿ ಉಬೈದ್ ಅಮ್ಮೆಂಬಳ ರವರು ಸಮಾರೋಪ ಭಾಷಣ ಮಾಡಿದರು.

- Advertisement -

ಈ ಸಂದರ್ಭದಲ್ಲಿ ಬ್ಲಾಕ್ ಸಮಿತಿ ಕಾರ್ಯದರ್ಶಿ ರಹಿಮಾನ್ ಬೋಳಿಯಾರ್ ಹಾಗೂ ಪದಾಧಿಕಾರಿಗಳು ಮತ್ತು ಬೂತ್ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪಾವೂರು ಗ್ರಾಮ ಸಮಿತಿ ಅಧ್ಯಕ್ಷರಾದ ಶಮೀರ್ ಟಿಪ್ಪುನಗರ ಸ್ವಾಗತಿಸಿ, ಕಾರ್ಯದರ್ಶಿ ಆಸಿಫ್ ಮಲಾರ್ ಧನ್ಯವಾದಗೈದರು.