SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಫೈಝಿ ಶನಿವಾರ ಬಂಟ್ವಾಳಕ್ಕೆ

Prasthutha|

ಮಂಗಳೂರು:  ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಫೈಝಿ ನಾಳೆ (ಶನಿವಾರ) ಬಂಟ್ವಾಳಕ್ಕೆ ಆಗಮಿಸಲಿದ್ದಾರೆ.

- Advertisement -

  ಬಂಟ್ವಾಳ ತಾಲೂಕಿನ ಗೂಡಿನಬಳಿ ಸಮುದಾಯ ಭವನದಲ್ಲಿ  SDPI  ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಶನಿವಾರ ನಡೆಯಲಿರುವ   SDPI ಪಕ್ಷದ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ SDPI  ರಾಷ್ಟ್ರೀಯ ಕಾರ್ಯದರ್ಶಿ ಮಂಡಳಿ ಸಮಿತಿ ಸದಸ್ಯರಾದ CP ಅಬ್ದುಲ್ ಲತೀಫ್ , ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರು ಬೆಂಗಳೂರು ಸರ್ವಜ್ಞ ನಗರದ ವಿಧಾನಸಭಾ ಚುನಾವಣೆಯ ಅಭ್ಯರ್ಥಿ ಅಬ್ದುಲ್ ಹನ್ನಾನ್ , ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಚುನಾವಣಾ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು , ರಾಜ್ಯ ಸಮಿತಿಯ ಸಂಯೋಜಕರಾದ ನವಾಝ್ ಉಳ್ಳಾಲ , ಮತ್ತು ಇತರ ನಾಯಕರು , ಗ್ರಾಮಾಂತರ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪಕ್ಷದ ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp