SDPI ರಾಷ್ಟ್ರೀಯ ಅಧ್ಯಕ್ಷ ಎಂ. ಕೆ. ಫೈಝಿ ನಾಳೆ ಮಂಗಳೂರಿಗೆ

Prasthutha|

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್  ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷ ಎಂ. ಕೆ. ಫೈಝಿ ಯವರು  ನಾಳೆ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.

- Advertisement -

ನಾಳೆ ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ರಾಷ್ಟ್ರೀಯ ಅಧ್ಯಕ್ಷರನ್ನು ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನಾಯಕರು ಹಾಗೂ ಕಾರ್ಯಕರ್ತರು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಳ್ಳಲಿದ್ದಾರೆ.

ಗುರುವಾರ ಹಾಗೂ ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಸಭೆ ಹಾಗೂ ರೋಡ್ ಶೋ ಮತ್ತು ಸಮಾಜದ ಗಣ್ಯ ವ್ಯಕ್ತಿಗಳನ್ನು ಭೇಟಿಯಾಗುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ