ಗ್ರಾಮ ಪಂಚಾಯತ್ ಅಧ್ಯಕ್ಷರ ಅಧಿಕಾರಕ್ಕೆ ಕತ್ತರಿ: ರಾಜ್ಯ ಸರ್ಕಾರದ ನಡೆಗೆ ಎಸ್ ಡಿಪಿಐ ವಿರೋಧ

Prasthutha|

ಬೆಂಗಳೂರು: ಗ್ರಾಮ ಪಂಚಾಯತ್ ಅಧ್ಯಕ್ಷರ ಅಧಿಕಾರಕ್ಕೆ ಕತ್ತರಿ ಹಾಕುವ ರಾಜ್ಯ ಸರ್ಕಾರದ ಕ್ರಮಕ್ಕೆ ಎಸ್ ಡಿಪಿಐ ತೀವ್ರ ವಿರೋಧ ವ್ಯಕ್ತಪಡಿಸಿದೆ.

- Advertisement -

ಈ ಬಗ್ಗೆ ಟ್ವೀಟ್ ಮಾಡಿರುವ ಎಸ್ ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ಉದ್ಯೋಗ ಖಾತ್ರಿ, ವಿವಿಧ ವಸತಿ ಯೋಜನೆಗಳ ಅನುಷ್ಠಾನಕ್ಕೆ ಹಣಕಾಸಿನ ನಿಧಿ, ತೆರಿಗೆ, ಖರ್ಚು-ವೆಚ್ಚಗಳ ಎಲ್ಲ ಚೆಕ್ ಗಳಿಗೂ ಖಡ್ಡಾಯವಾಗಿದ್ದ PDO ಹಾಗೂ ಪಂಚಾಯ್ತಿ ಅಧ್ಯಕ್ಷರ ಜಂಟಿ ಸಹಿಯ ಅಧಿಕಾರದಿಂದ ಚುನಾಯಿತ ಅಧ್ಯಕ್ಷರನ್ನು ಹೊರಗಿಡುವ ಸರ್ಕಾರದ ನಿರ್ಧಾರ ಚುನಾಯಿತ ಪ್ರತಿನಿಧಿಗಳ ಅಧಿಕಾರಮೊಟಕು ಗೊಳಿಸುವ ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ  ಎಂದು ಕಿಡಿಕಾರಿದ್ದಾರೆ.

ಪಂಚಾಯತ್ ರಾಜ್ ಕಾಯ್ದೆಯ 64 ರಿಂದ 70ರ ನಿಯಮಗಳಿಗೆ ತಿದ್ದುಪಡಿ ತರುವ ಮೂಲಕ ಬಿಜೆಪಿ ಸರ್ಕಾರವು ಹಣಕಾಸು ನಿರ್ವಹಣೆಯ ಹೊಣೆಗಾರಿಕೆಯಿಂದ ಗ್ರಾಮ ಪಂಚಾಯ್ತಿ ಅಧ್ಯಕ್ಷರನ್ನು ಹೊರಗಿಡಲು ನಿರ್ಧರಿಸಿ ರಾಜ್ಯದಲ್ಲಿ 5,963 ಗ್ರಾಮ ಪಂಚಾಯಿತಿಗಳ 91,437 ಗ್ರಾಮ ಪಂಚಾಯಿತಿ ಸದಸ್ಯರ ಮತ್ತು ಗ್ರಾಮ ಸಭೆಗಳ ಅಧಿಕಾರವನ್ನು ಕಿತ್ತುಕೊಂಡಂತಾಗಿದೆ ಎಂದು ಟೀಕಿಸಿದ್ದಾರೆ.

Join Whatsapp