January 14, 2021

SDPI ಉಡುಪಿ ಜಿಲ್ಲಾ ಘಟಕದ ವತಿಯಿಂದ ಗ್ರಾ.ಪಂ. ವಿಜೇತ ಅಭ್ಯರ್ಥಿಗಳಿಗೆ ಅಭಿನಂದನಾ ಸಮಾರಂಭ

ಉಡುಪಿ : ಸೋಶಿಯಲ್ ಪಾರ್ಟಿ ಆಫ್ ಇಂಡಿಯಾ(SDPI) ಉಡುಪಿ ಜಿಲ್ಲಾ ಘಟಕದ ವತಿಯಿಂದ, ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜೇತರಾದ ಅಭ್ಯರ್ಥಿಗಳಿಗೆ ಸನ್ಮಾನ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. SDPI ಬೆಂಬಲಿತ ಅಭ್ಯರ್ಥಿಗಳಿಗೆ ಸನ್ಮಾನ ಮತ್ತು ಮತದಾರರಿಗೆ ಅಭಿನಂದನಾ ಸಮಾರಂಭವನ್ನು ಉಡುಪಿಯ ಹೋಟೆಲ್ ದುರ್ಗಾ ಇಂಟರ್ನ್ಯಾಷನಲ್ ಸಭಾಭವನದಲ್ಲಿ ಆಯೋಜಿಸಲಾಗಿತ್ತು.  

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷ ಇಲ್ಯಾಸ್ ಸಾಸ್ತಾನರವರು ವಹಿಸಿದ್ದರು. ಮುಖ್ಯ ಅತಿಥಿ ಹಾಗೂ ದಿಕ್ಸೂಚಿ ಭಾಷಣಕಾರರಾಗಿ SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆಯವರು ಭಾಗವಹಿಸಿ ಮಾತನಾಡಿದರು.

SDPI ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ಅಲ್ಫಾನ್ಸೋ ಫ್ರಾಂಕೊ ಹಾಗೂ SDPI ರಾಜ್ಯ ಕಾರ್ಯದರ್ಶಿ ಅಶ್ರಫ್  ಮಾಚಾರ್ ರವರು ಅತಿಥಿಗಳಾಗಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯಾದ್ಯಂತ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ವಿಜೇತರಾದ SDPI ಬೆಂಬಲಿತ ಅಭ್ಯರ್ಥಿಗಳಿಗೆ ಸನ್ಮಾನಿಸಲಾಯಿತು. ಇದೇ ವೇಳೆ, ಕೊರೊನ ವಾರಿಯರ್ ಆಗಿ ಸೇವೆ ಸಲ್ಲಿಸಿದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ವೈದ್ಯಕೀಯ ಉಸ್ತುವಾರಿ ಆಗಿರುವ ಮುನೀರ್ ಕಲ್ಮಾಡಿ ಅವರನ್ನು ಸನ್ಮಾನಿಸಲಾಯಿತು..

ಕಾರ್ಯಕ್ರಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮೈಸೂರು ವಿಭಾಗೀಯ ಸಂಚಾಲಕ ಶೇಖರ್ ಹೆಜಮಾಡಿ, ಜಮೀಯ್ಯತುಲ್ ಫಲಾಹ್ ದ.ಕ. ಮತ್ತು ಉಡುಪಿ ಜಿಲ್ಲಾಧ್ಯಕ್ಷ ಶಭೀ ಅಹ್ಮದ್ ಕಾಝಿ, ರಾಷ್ಟ್ರೀಯ ಮುಸ್ಲಿಮ್ ಮೋರ್ಚಾ ರಾಜ್ಯಾಧ್ಯಕ್ಷ ತೌಫೀಕ್ ವೌಲಾನ, ಎಸ್‌ ವೈಎಸ್ ಜಿಲ್ಲಾ ಕಾರ್ಯದರ್ಶಿ ಹಂಝತ್ ಹೆಜಮಾಡಿ ಮಾತನಾಡಿದರು.

ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಕೆ.ಪಿ.ಇಬ್ರಾಹಿಂ, ಪಿಎಫ್‌ ಐ ಜಿಲ್ಲಾಧ್ಯಕ್ಷ ನಝೀರ್ ಅಹ್ಮದ್, ಬಾಮ್ಸೆಫ್‌ ನ ನಝೀರ್ ಬೆಳ್ವಾಯಿ, ಎನ್‌ ಎನ್‌ ಓ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹುಸೇನ್ ಹೈಕಾಡಿ, ಮಲ್ಪೆ ಜಾಮೀಯ ಮಸೀದಿ ಅಧ್ಯಕ್ಷ ಖತೀಬ್ ರಶೀದ್, ಉದ್ಯಮಿ ರಫೀಕ್ ಬಿಎಸ್‌ ಎಫ್, ಕೊಡವೂರು ಜಾಮೀಯ ಮಸೀದಿಯ ಇಮಾಮ್ ವೌಲಾನ ಜಾವೇದ್ ಕಾಸ್ಮೀ, SDPI ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಜೀದ್ ಹಸನ್ ಉಚ್ಚಿಲ, ಎನ್‌ ಡಬ್ಲೂ ಎಫ್ ವಲಯ ಅಧ್ಯಕ್ಷೆ ನಸೀಮ ಝರಾಯಿ, ವಲಯ ಕಾರ್ಯದರ್ಶಿ ನಾಝಿಯಾ ಬದ್ರುದ್ದೀನ್ ಉಪಸ್ಥಿತರಿದ್ದರು. ಶಫೀಕ್ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ಸುದ್ದಿಗಳು

ವಿಶೇಷ ವರದಿ