ಶಿವಮೊಗ್ಗ: ದೆಹಲಿಯ ಡಿಫೆಲ್ಸ್ ಪೊಲೀಸ್ ಅಧಿಕಾರಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ- ಎಸ್ ಡಿಪಿಐ ಕಾರ್ಯಕರ್ತರು ಶಿವಮೊಗ್ಗದಲ್ಲಿಂದು ಪ್ರತಿಭಟನೆ ನಡೆಸಿದರು.
ಪಕ್ಷದ ಜಿಲ್ಲಾಧ್ಯಕ್ಷ ಸಲೀಂ ಖಾನ್ ಮಾತನಾಡಿ, ದೆಹಲಿಯಲ್ಲಿ ಪೊಲೀಸ್ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ 21 ವರ್ಷ ಪ್ರಾಯದ ಮುಸ್ಲಿಮ್ ಯುವತಿಯನ್ನು ಅಪಹರಿಸಿ ಕ್ರೂರವಾಗಿ ಅತ್ಯಾಚಾರಗೈದು ಕೊಲ್ಲಲಾಗಿದೆ. ದೇಶದ ರಾಜಧಾನಿಯಲ್ಲಿ ನಡೆದ ಈ ಘಟನೆ ಆಘಾತಕಾರಿಯಾಗಿದ್ದು, ಇಡೀ ದೇಶವೇ ತಲೆತಗ್ಗಿಸುವಂತೆ ಮಾಡಿದೆ. ಆದರೆ ದೆಹಲಿ ಪೊಲೀಸರು ಘಟನೆಗೆ ಸಂಬಂಧ ಇಲ್ಲದವರನ್ನು ಬಂಧಿಸಿ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ದೇಶಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.