ಮುಸ್ಲಿಮರ 2ಬಿ ಮೀಸಲಾತಿ ರದ್ದು| ಮಾ.28ಕ್ಕೆ ದೇರಳಕಟ್ಟೆಯಲ್ಲಿ SDPI ಪ್ರತಿಭಟನೆ

Prasthutha|

ಮಂಗಳೂರು: ರಾಜ್ಯ ಸರ್ಕಾರ 2ಬಿ ಮುಸ್ಲಿಂ ಮೀಸಲಾತಿ ರದ್ದುಗೊಳಿಸಿರುವುದನ್ನು ಖಂಡಿಸಿ ಮತ್ತು 2 ಬಿ ಮೀಸಲಾತಿಯನ್ನು ಪುನರ್ ಸ್ಥಾಪಿಸಲು ಆಗ್ರಹಿಸಿ
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಮಂಗಳೂರು ಉಳ್ಳಾಲ ವಿಧಾನಸಭಾ ಕ್ಷೇತ್ರ ಸಮಿತಿ ಮಾ.28ರಂದು ಮಂಗಳವಾರ ಸಂಜೆ 4.30ಕ್ಕೆ ದೇರಳಕಟ್ಟೆ ಜಂಕ್ಷನ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

ಒಬಿಸಿ ಮೀಸಲಾತಿ ಪಟ್ಟಿಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ. 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿರುವ ಸರಕಾರದ ನಡೆಯನ್ನು SDPI ಪಕ್ಷ ತೀವ್ರವಾಗಿ ಖಂಡಿಸಿದ್ದು, ಹೋರಾಟದ ಎಚ್ಚರಿಕೆಯನ್ನು ನೀಡಿತ್ತು.

- Advertisement -