ಮಂಗಳೂರು: 143 ವಿಪಕ್ಷ ಸಂಸದರನ್ನು ಅಮಾನತುಗೊಳಿಸಿದ ಕೇಂದ್ರ ಸರಕಾರದ ಸರ್ವಾಧಿಕಾರಿ ಧೋರಣೆಯ ವಿರುದ್ಧ SDPI ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸುತ್ತಿದೆ.
ಸಂಸತ್ತಿನಲ್ಲಿ ನಡೆದ ಭದ್ರತಾ ಲೋಪದ ಬಗ್ಗೆ ಪ್ರಧಾನಿ ಮತ್ತು ಗೃಹ ಸಚಿವ ಇದುವರೆಗೂ ಸಂಸತ್ತಿನಲ್ಲಿ ಪ್ರತಿಕ್ರಿಯಿಸಿಲ್ಲ. ಪ್ರತಿಕ್ರಿಯೆಗೆ ಆಗ್ರಹಿಸಿದ ವಿಪಕ್ಷದ 141 ಸಂಸದರನ್ನು ಅಮಾನತುಗೊಳಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯಾಗುವುದಿಲ್ಲ. ಇದು ಸರ್ವಾಧಿಕಾರಿ ಧೋರಣೆಯಾಗಿದೆ. ಇದನ್ನು ಖಂಡಿಸಬೇಕಾಗಿರೋದು ಅಗತ್ಯವಾಗಿದೆ ಎಂದು ಎಸ್ ಡಿ ಪಿಐ ತಿಳಿಸಿದೆ.