Home ಟಾಪ್ ಸುದ್ದಿಗಳು ಪೌರತ್ವ ಕಾಯಿದೆ ಜಾರಿ ವಿರೋಧಿಸಿ ಎಸ್‌ ಡಿಪಿಐ ವತಿಯಿಂದ ಪುತ್ತೂರಿನ ದರ್ಬೆ ವೃತ್ತದಲ್ಲಿ ಪ್ರತಿಭಟನೆ

ಪೌರತ್ವ ಕಾಯಿದೆ ಜಾರಿ ವಿರೋಧಿಸಿ ಎಸ್‌ ಡಿಪಿಐ ವತಿಯಿಂದ ಪುತ್ತೂರಿನ ದರ್ಬೆ ವೃತ್ತದಲ್ಲಿ ಪ್ರತಿಭಟನೆ

ಪುತ್ತೂರು: ಕೇಂದ್ರ ಸರಕಾರ ಅಸಾಂವಿಧಾನಿಕ CAA ಜಾರಿ ಮಾಡಿದರ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದೇಶದಾದ್ಯಂತ ಕರೆ ನೀಡಿದ್ದ ಪ್ರತಿಭಟನೆಯ ಭಾಗವಾಗಿ  ಎಸ್‌ ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪುತ್ತೂರಿನ ದರ್ಬೆ ವೃತ್ತದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ  ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್ ರವರ ನೇತೃತ್ವದಲ್ಲಿ  ಬೃಹತ್ ಪ್ರತಿಭಟನೆ ನಡೆಯಿತು.

ಸಭೆಯಲ್ಲಿ ಪ್ರಾಸ್ತಾವಿಕವಾಗಿ ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಅಬ್ದುಲ್ ಹಮೀದ್ ಸಾಲ್ಮರ ಮಾತಾಡಿ  CAA ಕಾಯ್ದೆಯು ಈ ದೇಶದ ಜಾತ್ಯಾತೀತ ಪರಂಪರೆಗೆ ಮಾರಕ ಮತ್ತು ಇದನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

ದಿಕ್ಸೂಚಿ ಭಾಷಣ ಮಾಡಿದ ಪಕ್ಷದ ಜಿಲ್ಲಾ ಸಮಿತಿ ಸದಸ್ಯರೂ ಕ್ಷೇತ್ರ ಸಮಿತಿಯ ಉಸ್ತುವಾರಿಯೂ ಆಗಿರುವ ಅಬೂಬಕ್ಕರ್ ಸಿದ್ದೀಕ್ ಪುತ್ತೂರು ರವರು ಮಾತಾಡಿ ಈ ದೇಶವು ಸರ್ವ ಜನಾಂಗದ ಶಾಂತಿಯ ತೋಟವಾಗಬೇಕಾದರೆ ಸಂವಿಧಾನದ ಆಶಯಗಳನ್ನು ಉಪಯೋಗಿಸಿಕೊಂಡು ಅಧಿಕಾರಕ್ಕೆ ಬಂದ ಬಿಜೆಪಿ ಪಕ್ಷವು ಇಂದು ಅದೇ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ದೇಶವನ್ನು ಒಡೆಯುವ ಕಾರ್ಯ ಮಾಡುತ್ತಿದೆ.ಆದುದರಿಂದ ಈ ದೇಶದಿಂದಲೇ ಬಿಜೆಪಿ ಪಕ್ಷವನ್ನು ನಿರ್ನಾಮ ಮಾಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಸಮಾರೋಪ ಭಾಷಣವನ್ನು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್ ಮಾತಾಡಿ  ಈ ಜನವಿರೋಧಿ ಕಾನೂನನ್ನು ಹಿಂಪಡೆಯದಿದ್ದರೆ SDPI ಪಕ್ಷವು ಯಾವುದೇ ರಾಜಿ ಇಲ್ಲದೆ ದೇಶಾದ್ಯಂತ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು.

ಪ್ರತಿಭಟನಾ ಸಭೆಯಲ್ಲಿ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಉಸ್ಮಾನ್ ಏ.ಕೆ,ಜೊತೆ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಕೊಡಿಪ್ಪಾಡಿ, ಕೋಶಾಧಿಕಾರಿ ವಿಶ್ವನಾಥ ಪುಂಚತ್ತಾರು, ಕ್ಷೇತ್ರ ಸಮಿತಿ ಸದಸ್ಯರಾದ ಡಿ.ಬಿ. ಮುಸ್ತಫಾ ವಿಟ್ಲ, ಅಶ್ರಫ್ ಬಾವು ಪಡೀಲ್, ಹಾಗೂ ಬ್ಲಾಕ್ ಮಟ್ಟದ ಮತ್ತು ಪಟ್ಟಣ ಸಮಿತಿ ಮತ್ತು ನಗರ ಸಮಿತಿಯ ನಾಯಕರು ಮತ್ತು ವ್ಯಾಪ್ತಿಯ ಹಲವಾರು ಕಾರ್ಯಕರ್ತರು,ಬೆಂಬಲಿಗರು ಭಾಗವಹಿಸಿದ್ದರು.

 ಪುತ್ತೂರು ಕ್ಷೇತ್ರ ಪಕ್ಷ ಸಂಘಟನಾ ಕಾರ್ಯದರ್ಶಿ ರಿಯಾಝ್ ಬಳಕ್ಕ ರವರು ಕಾರ್ಯಕ್ರಮ ನಿರೂಪಿಸಿದರು

Join Whatsapp
Exit mobile version