ನಾಯಕರ ಮನೆಗಳ ಮೇಲೆ NIA ದಾಳಿ ಖಂಡಿಸಿ ದೇರಳಕಟ್ಟೆಯಲ್ಲಿ ಎಸ್ಡಿಪಿಐ ನಿಂದ ಪ್ರತಿಭಟನೆ

Prasthutha|

ದೇರಳಕಟ್ಟೆ: ಎಸ್ಡಿಪಿಐ ಪಕ್ಷದ ನಾಯಕರ ಮೇಲೆ ಬಿಜೆಪಿ ಸರ್ಕಾರದ ಅಣತಿಯಂತೆ ದಾಳಿ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ( NIA ) ಕಾರ್ಯವೈಖರಿಯನ್ನು ಖಂಡಿಸಿ ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ  ( ಎಸ್ಡಿಪಿಐ ) ಮಂಗಳೂರು ವಿಧಾನ ಸಭಾ ಕ್ಷೇತ್ರ ಸಮಿತಿಯ ನೇತೃತ್ವದಲ್ಲಿ ದೇರಳಕಟ್ಟೆ ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.

- Advertisement -

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್, ಬಿಜೆಪಿ ಸರ್ಕಾರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷಗಳನ್ನು ಮಟ್ಟ ಹಾಕಲು ಯತ್ನಿಸುತ್ತಿದೆ. ಇದರ ಭಾಗವಾಗಿ ನಮ್ಮ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಅವರ ಮನೆಯ ಮೇಲೆ ದಾಳಿ ನಡೆಸಲಾಗಿದೆ. ದಾಳಿಗಳ ಮೂಲಕ ನಮ್ಮ ಆತ್ಮಸ್ಥೈರ್ಯ ಕುಂದಿಸಲು ಯತ್ನಿಸುತ್ತಿರುವ ಬಿಜೆಪಿಯ ಅಜೆಂಡಾ ಯಶಸ್ವಿಯಾಗಲು ನಾವು ಬಿಡಲಾರೆವು ಎಂದರು.

ಪ್ರತಿಭಟನಾ ಸಭೆಯ ನೇತೃತ್ವವನ್ನು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಇರ್ಷಾದ್ ಅಜ್ಜಿನಡ್ಕ ವಹಿಸಿದ್ದರು. ಕಾರ್ಯದರ್ಶಿ ಝಾಹಿದ್ ಮಲಾರ್  ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರತಿಭಟನೆ ಪಕ್ಷದ ಕಾರ್ಯದರ್ಶಿ ಉಬೈದ್ ಅಮ್ಮೆಂಬಳ, ಕೋಶಾಧಿಕಾರಿ ಅಬ್ದುಲ್ ಲತೀಫ್ ಕೋಡಿಜಾಲ್, ಉಳ್ಳಾಲ ನಗರ ಸಮಿತಿ ಅಧ್ಯಕ್ಷರಾದ ಅಬ್ಬಾಸ್ ಎ. ಆರ್, ಉಪಾಧ್ಯಕ್ಷ ಇಮ್ತಿಯಾಜ್ ಕೋಟೆಪುರ, ಎಸ್ಡಿಟಿಯು ಅಧ್ಯಕ್ಷರಾದ ಅಬ್ದುರ್ರಹ್ಮಾನ್, ಕ್ಷೇತ್ರ ಸಮಿತಿ ಸದಸ್ಯರಾದ ಸುಹೇಲ್ ಉಳ್ಳಾಲ್, ಅಬ್ಬಾಸ್ ಕಿನ್ಯ, ನೌಶಾದ್ ಕಲ್ಕಟ್ಟ, ಮುಖಂಡರಾದ ಇಮ್ತಿಯಾಜ್ ಪಿಲಾರ್, ಕೌನ್ಸಿಲರ್ ರಮೀಜ್, ಕೋಟೆಕಾರ್ ಪಟ್ಟಣ ಸಮಿತಿ ಅಧ್ಯಕ್ಷ ಮೊಯ್ದಿನ್ ಅಜ್ಜಿನಡ್ಕ, ಮುನ್ನೂರು ಬ್ಲಾಕ್ ಸಮಿತಿ ಅಧ್ಯಕ್ಷ  ಬಶೀರ್ ಎಸ್. ಎಂ , ಕೊಣಾಜೆ ಬ್ಲಾಕ್ ಸಮಿತಿ ಅಧ್ಯಕ್ಷ ಕಮರ್ ಮಲಾರ್ ಮತ್ತಿತರರು ಉಪಸ್ಥಿತರಿದ್ದರು.

Join Whatsapp