ಎಸ್‌’ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆ

Prasthutha|

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್ ಅಧ್ಯಕ್ಷತೆಯಲ್ಲಿ ಚುನಾವಣಾ ಪೂರ್ವ ಬಾವಿ ಸಭೆಯು ಪಕ್ಷದ ಕಚೇರಿಯಲ್ಲಿ ನಡೆಯಿತು.

- Advertisement -

ಸಭೆಯಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಸ್ಫರ್ದಿಸುವ ಮತ್ತು ಅಭ್ಯರ್ಥಿ ಆಯ್ಕೆ ವಿಚಾರದ ಬಗ್ಗೆ ಮಹತ್ವದ ಚರ್ಚೆ ನಡೆಯಿತು.

ವಿಧಾನಸಭಾ ಕ್ಷೇತ್ರ ಸಮಿತಿಯ ಪದಾಧಿಕಾರಿಗಳು ಕಾರ್ಯಕರ್ತರಿಂದ ಸಂಗ್ರಹಿಸಿದ ಅಭಿಪ್ರಾಯವನ್ನು ವೀಕ್ಷಕರಾಗಿ ಆಗಮಿಸಿದ್ದ ದ.ಕ ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಮುಂದಿಟ್ಟರು.

- Advertisement -

ಕಾರ್ಯಕರ್ತರ ಅಭಿಪ್ರಾಯವನ್ನು ನಾಯಕರಿಂದ ಪಡೆದ ಅನ್ವರ್ ಸಾದಾತ್ ರವರು ಇದನ್ನು ರಾಜ್ಯ ಸಮಿತಿಯ ಮುಂದಿಟ್ಟು ಸ್ಫರ್ದಿಸುವ ಮತ್ತು ಅಭ್ಯರ್ಥಿ ಆಯ್ಕೆ ವಿಚಾರದ ಬಗ್ಗೆ ಅಂತಿಮ ನಿರ್ಧಾರವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸುವುದಾಗಿ ಸಭೆಯಲ್ಲಿ ಪ್ರಸ್ತಾಪಿಸಿದರು.

ಎಸ್‌’ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಸ್ವಾಗತಿಸಿ ಸಂಘಟನಾ ಕಾರ್ಯದರ್ಶಿ ಅಶ್ರಫ್ ಬಾವು ಧನ್ಯವಾದಗೈದರು. ಸಭೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು

Join Whatsapp