ನಟ ಚೇತನ್ ಅಹಿಂಸಾ ಬಂಧನ ವಾಕ್ ಸ್ವಾತಂತ್ರ್ಯದ ಹರಣ: SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಕಿಡಿ

Prasthutha|

ಬೆಂಗಳೂರು: ಹಿಂದುತ್ವದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಕಾರಣಕ್ಕೆ ನಟ, ಹೋರಾಟಗಾರ ಚೇತನ್ ಅಹಿಂಸಾ ಅವರನ್ನು ಬಂಧಿಸಲಾಗಿದೆ. ಇದು ವಾಕ್ ಸ್ವಾತಂತ್ರ್ಯದ ಹರಣ. ಈ ಬಂಧನವನ್ನು ನಾನು ಖಂಡಿಸುತ್ತೇನೆ ಎಂದು ಎಸ್’ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ತಿಳಿಸಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಟ ಚೇತನ್ ಅವರು ಹಿಂದುತ್ವದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ನೆಪವನ್ನು ಇಟ್ಟು ಅವರನ್ನು ಬಂಧಿಸಿರುವುದು ಖಂಡನೀಯ. ಇದು ವ್ಯಕ್ತಿಯ ವಾಕ್ ಸ್ವಾತಂತ್ರ್ಯದ ಹರಣ ಎಂದು ಕಿಡಿಕಾರಿದ್ದಾರೆ.

Join Whatsapp