SDPI ರಾಜ್ಯಾಧ್ಯಕ್ಷ ನೇತೃತ್ವದಲ್ಲಿ ನಾಳೆ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಸಭೆ

Prasthutha|

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸಭೆಯು ನಾಳೆ ಬಿ ಸಿ ರೋಡಿನಲ್ಲಿ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ರವರ ನೇತೃತ್ವದಲ್ಲಿ ನಡೆಯಲಿದೆ ಎಂದು ಎಸ್ ಡಿಪಿಐ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.

- Advertisement -

ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿ ಆಯ್ಕೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿರುವುದರಿಂದ ಈ ಸಭೆ ಮಹತ್ವ ಪಡೆದುಕೊಂಡಿದೆ.

 ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಗಳಾದ ಇಲ್ಯಾಸ್ ಮುಹಮ್ಮದ್ ತುಂಬೆ , ಮುಹಮ್ಮದ್ ಅಶ್ರಫ್ ,ರಾಷ್ಟ್ರೀಯ ಕಾರ್ಯದರ್ಶಿ ಗಳಾದ ರಿಯಾಝ್ ಫರಂಗಿಪೇಟೆ ,ಅಲ್ಫೋನ್ಸ್ ಫ್ರಾಂಕೋ , ರಾಜ್ಯ ಪ್ರಧಾನ ಕಾರ್ಯದರ್ಶಿ ಗಳಾದ ಅಬ್ದುಲ್ ಲತೀಫ್, ಅಬ್ದುಲ್ ಮಜೀದ್ ತುಂಬೆ , ರಾಜ್ಯ ಚುನಾವಣಾ ಉಸ್ತುವಾರಿ ಅಬ್ದುಲ್ ಹನ್ನಾನ್ ,ರಾಜ್ಯ ಕಾರ್ಯದರ್ಶಿ ಆನಂದ್ ಮಿತ್ತಬೈಲ್ ಹಾಗೂ ಇತರ ರಾಜ್ಯ ಸಮಿತಿ ನಾಯಕರು, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಸಮಿತಿ ಸದಸ್ಯರು, ಕ್ಷೇತ್ರ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ ಗಳು ಭಾಗವಹಿಸಲಿದ್ದಾರೆ.



Join Whatsapp