Home ಕರಾವಳಿ ಬಜರಂಗದಳ ಕಾರ್ಯಕರ್ತರಿಂದ ಹತ್ಯೆಯಾದ ಮಸೂದ್ ಮನೆಗೆ ಎಸ್ ಡಿಪಿಐ ರಾಜ್ಯಾಧ್ಯಕ್ಷ ಭೇಟಿ

ಬಜರಂಗದಳ ಕಾರ್ಯಕರ್ತರಿಂದ ಹತ್ಯೆಯಾದ ಮಸೂದ್ ಮನೆಗೆ ಎಸ್ ಡಿಪಿಐ ರಾಜ್ಯಾಧ್ಯಕ್ಷ ಭೇಟಿ

ಮಂಗಳೂರು: ಬಜರಂಗದಳ ಕಾರ್ಯಕರ್ತರಿಂದ ಹತ್ಯೆಯಾದ ಮಸೂದ್ ಮನೆಗೆ ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಭೇಟಿ ನೀಡಿದ್ದಾರೆ.


ಮಸೂದ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಪಡೆದು ಇಂದು ಬೆಳಿಗ್ಗೆ ಕಳಂಜದ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ನ್ಯಾಯ ಸಿಗುವವರೆಗೂ ಪಕ್ಷ ಕುಟುಂಬದೊಂದಿಗೆ ಇರಲಿದೆ ಎಂದು ಭರವಸೆ ನೀಡಿದರು.


ಈ ಸಂದರ್ಭದಲ್ಲಿ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಕೋಶಾಧಿಕಾರಿ ಮಮ್ಮಾಲಿ ಹಾಜಿ ಬೆಳ್ಳಾರೆ ಸೇರಿದಂತೆ ಮತ್ತಿತ್ತರು ಉಪಸ್ಥಿತರಿದ್ದರು.

Join Whatsapp
Exit mobile version