SDPI ತಲಪಾಡಿ ಗ್ರಾಮ ಸಮಿತಿ ವತಿಯಿಂದ ನಾಳೆ ಬೃಹತ್ ರಕ್ತದಾನ ಶಿಬಿರ

Prasthutha|

ಮಂಗಳೂರು: ರಕ್ತ ಕೊಟ್ಟು ಬಾಂಧವ್ಯ ಕಟ್ಟು ಎಂಬ ಘೋಷ ವಾಕ್ಯದೊಂದಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ರಕ್ತದಾನ ಮಾಸಾಚರಣೆಯನ್ನು ಹಮ್ಮಿಕೊಂಡಿದ್ದು ಇದರ ಪ್ರಯುಕ್ತ SDPI ತಲಪಾಡಿ ಗ್ರಾಮ ಸಮಿತಿಯು, ಯಾನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ಇದರ ಸಹಯೋಗದೊಂದಿಗೆ ಫೆ. 26ರಂದು ಆದಿತ್ಯ ವಾರದಂದು ಸಿಟಿಜನ್ ಅಕಾಡೆಮಿ ಕೆ. ಸಿ. ನಗರದಲ್ಲಿ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.

- Advertisement -


ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ SDPI ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಭಾಗವಹಿಸಲಿದ್ದಾರೆ
ಸಾಧಕರು, ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಸಮಾಜ ಸೇವಕರು, ಊರಿನ ಹಿರಿಯ ಸೇವಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಕೂಡಾ ಹಮ್ಮಿಕೊಳ್ಳಲಾಗಿದೆ ಎಂದು SDPI ತಲಪಾಡಿ ಗ್ರಾಮ ಸಮಿತಿ ಅಧ್ಯಕ್ಷರಾದ ಶಕೀಲ್ ಕೆ ಸಿ ರೋಡ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ



Join Whatsapp