ಜಿಪಂ ನಿರ್ಲಕ್ಷ್ಯದಿಂದ ಮೊಗ್ರಾಲ್ ಶಾಲೆಗೆ ನೋಟಿಸ್: SDPI

Prasthutha: January 28, 2022

ಕುಂಬಳೆ : ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ  ಅಂತಾರಾಷ್ಟ್ರೀಯ ಮಟ್ಟದಲ್ಲಿರುವ ಹಾಗೂ ಹಲವಾರು ವಿದ್ಯಾರ್ಥಿಗಳು ಕಲಿಯುತ್ತಿರುವ ಮೊಗ್ರಾಲ್ ಪುತ್ತೂರು ಶಾಲೆಗಿರುವ ವಿದ್ಯುತ್ ಸಂಪರ್ಕಕ್ಕೆ ಬೇಕಾಗಿ ಟ್ರಾನ್ಸಫಾರ್ಮರ್ ಅಳವಡಿಸಿದ ಬಿಲ್ ಇದುವರೆಗೆ ಪಾವತಿಸದೇ ಇರುವುದರಿಂದ ಕೆ.ಎಸ್.ಇ.ಬಿಯ ನೋಟೀಸ್ ಶಾಲೆಗೆ ಬಂದಿರುವುದು ಜಿಲ್ಲಾ ಪಂಚಾಯತ್ ಕಡೆಯಿಂದುಂಟಾದ ಕಡೆಗಣನೆಯೇ ಕಾರಣ ಎಂದು ಎಸ್.ಡಿ.ಪಿ.ಐ. ಆರೋಪಿಸಿದೆ.

ವಿವಿಧ ರಾಜಕೀಯ ಪಕ್ಷಗಳ ನಿರಂತರ ಶ್ರಮದ ಫಲವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿರುವ ಮೊಗ್ರಾಲ್ ಪುತ್ತೂರ್ ಶಾಲೆಗೆ ಜಿಲ್ಲಾ ಪಂಚಾಯತ್ ತೋರುತ್ತಿರುವ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಸ್.ಡಿ.ಪಿ.ಐ ಮಂಜೇಶ್ವರ ಮಂಡಲ ಉಪಾಧ್ಯಕ್ಷ ಅಲಿ ಶಾಮ ಆರಿಕ್ಕಾಡಿ ಎಚ್ಚರಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!