►SDPI ರಾಜ್ಯ ಚುನಾವಣಾ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ ನೇತೃತ್ವದಲ್ಲಿ ಬಂಟ್ವಾಳದಲ್ಲಿ ಚುನಾವಣಾ ಸಮಿತಿ ಸಭೆ
ಬಂಟ್ವಾಳ: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಚುನಾವಣಾ ಉಸ್ತುವಾರಿಯಾದ ಅಫ್ಸರ್ ಕೊಡ್ಲಿಪೇಟೆ ನೇತೃತ್ವದಲ್ಲಿ ಚುನಾವಣಾ ಸಮಿತಿ ಸಭೆಯು ಬಿ.ಸಿ ರೋಡ್ ಕೈಕಂಬದಲ್ಲಿರುವ ಪಕ್ಷದ ಕಛೇರಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಬಂಟ್ವಾಳ ಕ್ಷೇತ್ರದ ರಾಷ್ಟ್ರೀಯ ವೀಕ್ಷಕರಾದ ವಿ.ಎಂ. ಫೈಝಲ್, ಕಾಂಗ್ರೆಸ್ ಸೇರಿದಂತೆ ಬಹುತೇಕ ರಾಷ್ಟ್ರೀಯ ಪಕ್ಷಗಳು ಇಂದು ಜನರಿಂದ ತಿರಸ್ಕೃತಗೊಂಡು ತನ್ನ ರಾಜಕೀಯವನ್ನು ರಾಷ್ಟ್ರೀಯ ರಾಜಕೀಯದಿಂದ ರಾಜ್ಯ ಮಟ್ಟಕ್ಕೆ ಸೀಮಿತಗೊಳಿಸುತ್ತಿರುವ ಕಾಲಘಟ್ಟದಲ್ಲಿ, ಎಸ್ ಡಿ ಪಿ ಐ ಎಂಬ ಪಕ್ಷ ತಳಮಟ್ಟದಿಂದ ರಾಷ್ಟ್ರ ಮಟ್ಟಕ್ಕೆ ತನ್ನ ರಾಜಕೀಯವನ್ನು ವಿಸ್ತರಿಸಿಕೊಂಡು ಭವಿಷ್ಯದಲ್ಲಿ ದೇಶದಲ್ಲಿರುವ ಪರ್ಯಾಯ ರಾಜಕೀಯ ಪಕ್ಷವಾಗಿ ಬೆಳೆಯಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಎಸ್ ಡಿ ಪಿ ಐ ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್ ತುಂಬೆ, ರಾಜ್ಯ ಉಪ ಚುನಾವಣಾ ಉಸ್ತುವಾರಿ ನವಾಝ್ ಉಳ್ಳಾಲ, ಎಸ್ ಡಿ ಪಿ ಐ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು, ಜಮಾಲ್ ಜೋಕಟ್ಟೆ, ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಮೂನಿಷ್ ಆಲಿ, ಕ್ಷೇತ್ರ ಸಮಿತಿ ಚುನಾವಣಾ ಉಸ್ತುವಾರಿ ಶಾಹುಲ್ ಎಸ್ ಹೆಚ್, ಕ್ಷೇತ್ರ ಸಮಿತಿ ಕಾರ್ಯದರ್ಶಿ ಕಲಂದರ್ ಪರ್ತಿಪಾಡಿ ಹಾಗೂ ಕ್ಷೇತ್ರದ ಚುನಾವಣೆ ಸಮಿತಿ ನಾಯಕರು ಉಪಸ್ಥಿತರಿದ್ದರು.