ತೈಲ ಬೆಲೆಯೇರಿಕೆ ವಿರುದ್ಧ ಎಸ್ ಡಿ ಪಿ ಐ ವತಿಯಿಂದ ಜೂನ್ 16ರಂದು ದ.ಕ. ಜಿಲ್ಲಾದ್ಯಂತ ಪ್ರತಿಭಟನೆ

Prasthutha: June 14, 2021

ಮಂಗಳೂರು: ತೈಲ ಬೆಲೆ ಏರಿಕೆ ವಿರುದ್ಧ ಜೂನ್ 16ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು SDPI ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ SDPI ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು, ಕೋವಿಡ್ ಲಾಕ್ ಡೌನ್ ಜಾರಿಯಲ್ಲಿರುವ ಪ್ರಸಕ್ತ ಸಮಯದಲ್ಲಿ ಜನಸಾಮಾನ್ಯರು ಒಂದು ಹೊತ್ತಿನ ಅನ್ನಕ್ಕಾಗಿ ಪರದಾಡುತ್ತಿರುವಾಗ ಜನರ ನೆರವಿಗೆ ಧಾವಿಸಬೇಕಾದ ಸರಕಾರ ಕಾರ್ಪೊರೇಟ್ ಕಂಪೆನಿಗಳ ಹಿತಕಾಯುವ ನಿಟ್ಟಿನಲ್ಲಿ ನಿರಂತರವಾಗಿ ತೈಲ ಬೆಲೆಯನ್ನು ಏರಿಸುವ ಮೂಲಕ ಜನಸಾಮಾನ್ಯರ ಬದುಕನ್ನು ಬೀದಿಗೆ ತಳ್ಳುವ ಅಮಾನವೀಯ ಕೆಲಸ ಕಾರ್ಯಗಳನ್ನು ಮಾಡುತ್ತಿದೆ. ಲಾಕ್ ಡೌನ್ ಮರೆಯಲ್ಲಿ ದಿನಂಪ್ರತಿ ತೈಲ ಬೆಲೆಯನ್ನು ಏರಿಸುವ ಮೂಲಕ ಇಂದು ಪೆಟ್ರೋಲ್ ಬೆಲೆ ನೂರು ರೂಪಾಯಿ ದಾಟುವಂತೆ ಮಾಡಲಾಗಿದೆ. ಇದರಿಂದಾಗಿ ಭಾರತ ಇಂದು ಜಗತ್ತಿನ ಅತೀ ದುಬಾರಿ ಬೆಲೆಗೆ ತೈಲ ಮಾರುವ ದೇಶವೆಂಬ ಕುಖ್ಯಾತಿ ಗಳಿಸಿದೆ ಇದನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.

ಇಂತಹ ಅನಿಯಂತ್ರಿತ ತೈಲ ಬೆಲೆಯೇರಿಕೆಯ ವಿರುದ್ಧ ಜೂನ್ 16 ಬುಧವಾರದಂದು ಬೆಳಿಗ್ಗೆ 6 ರಿಂದ 9 ಗಂಟೆಯ ವರೆಗೆ SDPI ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾದ್ಯಂತ ವಿವಿಧ ರೀತಿಯ ಪ್ರತಿಭಟನೆ ನಡೆಸಲಾಗುವುದು. ಅಂದು ಎಲ್ಲಾ ತಾಲೂಕು ಕೇಂದ್ರ, ನಗರ, ಗ್ರಾಮ ಹಾಗೂ ವಾರ್ಡ್ ಮಟ್ಟದಲ್ಲಿ ಕೇಂದ್ರ ಸರಕಾರದ ಒಡೆತನದ ಪೆಟ್ರೋಲ್ ಬಂಕ್ ಮುಂದೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸರಕಾರದ ಜನವಿರೋಧಿ ನೀತಿಯ ವಿರುದ್ಧ ವಿಭಿನ್ನ ರೂಪಗಳಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಯಲ್ಲಿ ಎಸ್ ಡಿ ಪಿ ಐ ಪಕ್ಷದ ಎಲ್ಲಾ ಅಭಿಮಾನಿಗಳು, ಸಾರ್ವಜನಿಕರು ಭಾಗವಹಿಸಬೇಕೆಂದು  ಅವರು ಮನವಿ ಮಾಡಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ