Home ಕರಾವಳಿ ಅಮಾಯಕರ ಬಂಧನದ ವಿರುದ್ಧ SDPI ಯಿಂದ ಇಂದು ಮಂಗಳೂರಿನಲ್ಲಿ ಪ್ರತಿಭಟನೆ

ಅಮಾಯಕರ ಬಂಧನದ ವಿರುದ್ಧ SDPI ಯಿಂದ ಇಂದು ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು: ಬಿಜೆಪಿ ಸರಕಾರವು NIA, ಹಾಗೂ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ಅಮಾಯಕರನ್ನು ನಿರಂತರವಾಗಿ ಬಂಧಿಸುತ್ತಿರುವ ಧಮನಕಾರಿ ನೀತಿಯ ವಿರುದ್ಧ ಎಸ್ಡಿಪಿಐ ಸೋಮವಾರ ಪ್ರತಿಭಟನೆ ಹಮ್ಮಿಕೊಂಡಿದೆ.


ಎಸ್ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಸೋಮವಾರ ಸಂಜೆ ನಾಲ್ಕು ಗಂಟೆಗೆ ಮಂಗಳೂರಿನ ಮಿನಿ ವಿಧಾನಸೌಧದ ಮುಂಬಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಪ್ರತಿಭಟನೆಯಲ್ಲಿ ಪಕ್ಷದ ರಾಷ್ಟ್ರೀಯ, ರಾಜ್ಯ ನಾಯಕರು ಭಾಗವಹಿಸಲಿದ್ದಾರೆ. ಸರಕಾರದ ನೀಚ ರಾಜಕೀಯದ ಧಮನಕಾರಿ ನೀತಿಗಳ ವಿರುದ್ಧ ನಡೆಯುವ ಹಕ್ಕೊತ್ತಾಯ ಪ್ರತಿಭಟನೆಯಲ್ಲಿ ನಾಡಿನ ಎಲ್ಲಾ ಸಮಾನ ಮನಸ್ಕರು, ಹಿತೈಷಿಗಳು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿ ಗೊಳಿಸಬೇಕೆಂದು SDPI ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Join Whatsapp
Exit mobile version