SDPI ಉಡುಪಿ ಜಿಲ್ಲಾ ಸಮಿತಿ ವತಿಯಿಂದ ನಾಯಕರ ಶೃಂಗ ಸಭೆ

Prasthutha|

ಉಡುಪಿ: ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ನಾಯಕರ ಶೃಂಗಸಭೆಯು ಉಡುಪಿಯ ಬಾಸೆಲ್ ಮಿಶನರೀಸ್ ಸ್ಮಾರಕ ಸಭಾಭವನದಲ್ಲಿ ಜಿಲ್ಲಾಧ್ಯಕ್ಷರಾದ ಶಾಹಿದ್ ಆಲಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.

- Advertisement -

SDPI ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಫೈಝಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ದೇಶದ ಪ್ರಸಕ್ತ ರಾಜಕೀಯ ಸನ್ನಿವೇಶಗಳ ಬಗ್ಗೆ ಬೆಳಕು ಚೆಲ್ಲಿದರು. SDPI ಕರ್ನಾಟಕ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ರಿಯಾಜ್ ಕಡಂಬು ರವರು ಸಮಾರೋಪ ಭಾಷಣ ಮಾಡಿದರು.

ಸಭೆಯಲ್ಲಿ SDPI ಉಡುಪಿ ಜಿಲ್ಲೆಯ ಪಂಚಾಯತ್ ಮಟ್ಟದಿಂದ ಹಿಡಿದು ಜಿಲ್ಲಾ ಮಟ್ಟದ ವರೆಗಿನ ನಾಯಕರು ಬಾಗವಹಿಸಿದ್ದರು.
SDPI ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಭಾವ ಸ್ವಾಗತಿಸಿ ಹನೀಫ್ ಮೂಳೂರ್ ಕಾರ್ಯಕ್ರಮ ನಿರೂಪಿಸಿದರು.

Join Whatsapp
Exit mobile version