ಪ್ರಚೋದನಕಾರಿ ಭಾಷಣಗೈದ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಎಸ್.ಡಿ. ಪಿ.ಐ ವತಿಯಿಂದ ದೂರು

Prasthutha|

ತೀರ್ಥಹಳ್ಳಿ : ಶಿವಮೊಗ್ಗದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಸಚಿವ ಕೆ.ಎಸ್ ಈಶ್ವರಪ್ಪನವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಪಕ್ಷದ ಶಿವಮೊಗ್ಗ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲೆಯ ಮಾನ್ಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗಿದೆ .

- Advertisement -

ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರೆನ್ನುವುದನ್ನು ಮರೆತು ಪ್ರಚೋದನೆ ನೀಡಲು ಮುಂದಾಗಿರುವ ಸಚಿವ ಕೆ.ಎಸ್ ಈಶ್ವರಪ್ಪ ಭಾಷಣವು ರಾಜ್ಯದಲ್ಲಿ ಗಲಭೆಗೆ ಅನುವು ಮಾಡಿಕೊಡುತ್ತದೆ. ಇಂತಹ ಹೇಳಿಕೆ ನೀಡಿರುವ ಸಚಿವರನ್ನು ಕೂಡಲೇ ಸಚಿವ ಸ್ಥಾನದಿಂದ ಕೆಳಗಿಳಿಸಿ ಕಾನೂನಿನ ಪಾಠ ಕಲಿಸಬೇಕಾಗಿದೆ ಹಾಗೂ ರಾಜ್ಯದಲ್ಲಿ ಶಾಂತಿ ಕಾಪಾಡಬೇಕಾಗಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಶಿವಮೊಗ್ಗ ಜಿಲ್ಲಾ ಸಮಿತಿಯು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದೆ

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಸಲೀಂ ಖಾನ್, ಜಿಲ್ಲಾ ಸಮಿತಿ ಸದಸ್ಯರಾದ ಸಾಧಿಕ್ ಖಾನ್, ಜೀಲಾನ್ ರಜಾ ಖಾನ್, ಫೈರೋಜ್ ಖಾನ್ ಹಾಗೂ ಇಮ್ರಾನ್ ಉಪಸ್ಥಿತರಿದ್ದರು.



Join Whatsapp