SDPI,PFI ಸಂಘಟನೆಯನ್ನು ಬೆಳೆಸಿದ್ದು ಕಾಂಗ್ರೆಸ್ ಮತ್ತು ಕಮ್ಯೂನಿಸ್ಟರು : ಪ್ರಹ್ಲಾದ್ ಜೋಶಿ

Prasthutha|

ಹುಬ್ಬಳ್ಳಿ: ಪಿಎಫೈ ಮತ್ತು ಎಸ್‌ಡಿಪಿಐ ಸಂಘಟನೆಯನ್ನು ಬೆಳೆಸಿದ್ದು ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕರ ಬೆಂಬಲವಿದ್ದು, ಈ ಸಂಘಟನೆ ಕಾಂಗ್ರೆಸ್ ಬೆಳೆಸಿದ ಕೂಸು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.

- Advertisement -

ಈ ಕುರಿತು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಡಿಪಿಐ, ಪಿಎಫ್‌‌ಐ ಇವು ಕಾಂಗ್ರೆಸ್, ಕಮ್ಯೂನಿಸ್ಟರು ಬೆಳೆಸಿದ ಕೂಸು. ಈ ಸಂಘಟನೆಗಳಿಗೆ ಕಾಂಗ್ರೆಸ್ ಕುಮ್ಮಕ್ಕು ಇದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಈ ಸಂಘಟನೆಗಳ ಮೇಲಿನ ಕೇಸ್ ಗಳನ್ನು ವಜಾ ಮಾಡಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.

ಆರ್‌ಎಸ್‌ಎಸ್ ಮೂಲ ಪ್ರಶ್ನಿಸಿರುವ ಸಿದ್ದರಾಮಯ್ಯ ಹೇಳಿಕೆ ಕುರಿತಾಗಿ ಮಾತನಾಡಿದ ಅವರು, ಆರ್‌ಎಸ್‌ಎಸ್ ಮೂಲ, ಬಿಜೆಪಿ ಮೂಲವನ್ನು ಕೇಳುವ ಸಿದ್ದರಾಮಯ್ಯನವರ ಮೂಲವನ್ನೇ ಜನ ಕಿತ್ತುಕೊಂಡಿದ್ದಾರೆ ಎಂದು ವ್ಯಂಗ್ಯವಾಡುವ ಮೂಲಕ ಸಿದ್ದರಾಮಯ್ಯರ ಪ್ರಶ್ನೆಗೆ ಉತ್ತರಿಸಲಾಗದೆ ನುಣುಚಿಕೊಂಡ್ಡಿದ್ದಾರೆ.

Join Whatsapp