Home ಟಾಪ್ ಸುದ್ದಿಗಳು ನಾಳೆ ದಾವಣಗೆರೆಯಲ್ಲಿ SDPI ಹಮ್ಮಿಕೊಂಡಿದ್ದ ಜನಾಧಿಕಾರ ಸಮಾವೇಶ ಮುಂದೂಡಿಕೆ

ನಾಳೆ ದಾವಣಗೆರೆಯಲ್ಲಿ SDPI ಹಮ್ಮಿಕೊಂಡಿದ್ದ ಜನಾಧಿಕಾರ ಸಮಾವೇಶ ಮುಂದೂಡಿಕೆ

ದಾವಣಗೆರೆ: ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಮಾವೇಶ ಮುಂದೂಡುವಂತೆ ಜಿಲ್ಲಾಡಳಿತ ಮಾಡಿದ ಮನವಿಗೆ ಸ್ಪಂದಿಸಿದ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ- ಎಸ್ ಡಿಪಿಐ ದಾವಣೆಗೆರೆಯಲ್ಲಿ ಹಮ್ಮಿಕೊಂಡಿದ್ದ ಜನಾಧಿಕಾರ ಸಮಾವೇಶವನ್ನು ಮುಂದೂಡಿದೆ.

ದಾವಣಗೆರೆಯಲ್ಲಿ ನಾಳೆ ಸಂಜೆ 6ರಿಂದ ರಾತ್ರಿ 10ರವರೆಗೆ ನಿಷೇಧಾಜ್ಞೆ ಹೇರಲಾಗಿದ್ದು, ಸಮಾವೇಶವನ್ನು ಮುಂದೂಡುವಂತೆ ದಾವಣಗೆರೆ ಡಿ.ಸಿ. ಮಹಾತೇಂಶ್ ಬೀಳಗಿ SDPI ನಾಯಕರಲ್ಲಿ ವಿನಂತಿಸಿದ್ದಾರೆ.

ಪ್ರವಾದಿ ಅವಹೇಳನದ ಕುರಿತು ದೇಶಾದ್ಯಂತ ಪ್ರತಿಭಟನೆಗಳು ಹೆಚ್ಚಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಮಾವೇಶವನ್ನು ಮುಂದೂಡುವಂತೆ ಜಿಲ್ಲಾಡಳಿತ ಮನವಿ ಮಾಡಿದ ಹಿನ್ನೆಲೆಯಲ್ಲಿ ಸಮಾವೇಶವನ್ನು ಮುಂದೂಡಲಾಗಿದೆ.

Join Whatsapp
Exit mobile version