ಇಂದು ಕಣ್ಣೂರಿನಲ್ಲಿ ಎಸ್ ಡಿಪಿಐನ ಜನಾಧಿಕಾರ ಸಮಾವೇಶ

Prasthutha: May 27, 2022

►ಮಂಗಳೂರಿಗೆ ಆಗಮಿಸಿದ ಎಸ್ ಡಿಪಿಐ ಕೇರಳ ರಾಜ್ಯಾಧ್ಯಕ್ಷ

ಮಂಗಳೂರು: ಬಿಜೆಪಿ ಸರ್ಕಾರದ ದ್ವೇಷ ಮತ್ತು ದುರಾಡಳಿತದ ವಿರುದ್ಧ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್ ಡಿಪಿಐ ಶುಕ್ರವಾರ (ಇಂದು) ಮಂಗಳೂರಿನ ಹೊರವಲಯ ಕಣ್ಣೂರಿನಲ್ಲಿ ಜನಾಧಿಕಾರ ಸಮಾವೇಶ ಹಮ್ಮಿಕೊಂಡಿದೆ.
ಕಣ್ಣೂರು ಮೈದಾನದ ಕೆ.ಎಂ.ಶರೀಫ್” ಬೃಹತ್ ವೇದಿಕೆಯಲ್ಲಿ ಇಂದು ಮಧ್ಯಾಹ್ನ 2.30ಕ್ಕೆ ಸಮಾವೇಶಕ್ಕೆ ಚಾಲನೆ ದೊರೆಯಲಿದ್ದು, 50 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ.
ಸಮಾವೇಶದಲ್ಲಿ ಅಧ್ಯಕ್ಷತೆಯನ್ನು ಎಸ್ ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ವಹಿಸಲಿದ್ದು, ಎಸ್ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ ಫೈಝಿ ಸಮಾವೇಶ ಉದ್ಘಾಟಿಸಲಿದ್ದಾರೆ.
SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ, ಕೇರಳ ರಾಜ್ಯಾಧ್ಯಕ್ಷ ಅಶ್ರಫ್ ಮೌಲವಿ ಮುವಾಟ್ಟುಪುಝ, ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ , ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸೋ ಫ್ರಾಂಕೋ, SDPI ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ ಆರ್ ಭಾಸ್ಕರ್ ಪ್ರಸಾದ್ ನೆಲಮಂಗಲ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪಕ್ಷದ ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ನಂಜಯ್ಯ, ರಾಜ್ಯ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು, ವುಮೆನ್ ಇಂಡಿಯಾ ಮೂವ್ ಮೆಂಟ್ ರಾಜ್ಯಾಧ್ಯಕ್ಷೆ ಶಾಹಿದಾ ತಸ್ನೀಮ್, ಕ್ಯಾಂಪಸ್ ಫ್ರಂಟ್ ರಾಜ್ಯಾಧ್ಯಕ್ಷ ಅಥಾವುಲ್ಲಾ ಪೂಂಜಾಲಕಟ್ಟೆ, ನ್ಯಾಷನಲ್ ವಿಮೆನ್ಸ್ ಫ್ರಂಟ್ ರಾಜ್ಯಾಧ್ಯಕ್ಷೆ ಫರ್ಝಾನಾ ಮಹಮ್ಮದ್ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಎಸ್ ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ತಿಳಿಸಿದ್ದಾರೆ

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!