ಪೌರ ಕಾರ್ಮಿಕರು ನಡೆಸುತ್ತಿರುವ ಮುಷ್ಕರಕ್ಕೆ SDTU ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಬೆಂಬಲ

Prasthutha|

ಮಂಗಳೂರು: ನೇರ ನೇಮಕಾತಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಪೌರ ಕಾರ್ಮಿಕರು ಕಳೆದ ಹತ್ತು ದಿನಗಳಿಂದ ರಾಜ್ಯಾದ್ಯಂತ ತನ್ನ ಕೆಲಸ ಕಾರ್ಯಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಭಾಗವಾಗಿ ದ.ಕ. ಜಿಲ್ಲೆಯ ಮಂಗಳೂರಿನ ಅಳಕೆ ಮಾರ್ಕೆಟ್ ಬಳಿ ಪೌರ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದು, ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ (SDTU) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ಸೂಚಿಸಿದೆ.
ಈ ಸಂದರ್ಭದಲ್ಲಿ ಮಾತನಾಡಿದ SDTU ರಾಜ್ಯ ಕೋಶಾಧಿಕಾರಿ ಖಾದರ್ ಫರಂಗಿಪೇಟೆ, ಎಲ್ಲರೂ ಪರಿಸರ ಸ್ವಚ್ಛವಾಗಿರಬೇಕು ಎಂದು ಬಯಸುತ್ತಾರೆ. ಆದರೆ ನಮ್ಮ ಮನೆ, ನಗರ, ಪಟ್ಟಣವನ್ನು ಸ್ವಚ್ಛವಾಗಿಡಲು ಪ್ರಮುಖವಾಗಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರು ಕಳೆದ ಹತ್ತು ದಿನಗಳಿಂದ ನೇರ ನೇಮಕಾತಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರಕಾರ ಮತ್ತು ಜನ ಪ್ರತಿನಿಧಿಗಳು ಪೌರ ಕಾರ್ಮಿಕರ ಬೇಡಿಕೆ ಈಡೇರಿಸಲು ಮೀನಾಮೇಷ ಎಣಿಸುತ್ತಿರುವುದು ಖಂಡನೀಯ. ಸರಕಾರ ಈ ಕೂಡಲೇ ಇವರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು. ಮಾತ್ರವಲ್ಲ ಮಾರ್ಚ್ 21 ರಂದು ನಡೆದ SDTU ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ಕಾರಿಣಿ ಸಮಿತಿ ಸಭೆಯಲ್ಲಿ ಚರ್ಚಿಸಿ ಪೌರ ಕಾರ್ಮಿಕರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮತ್ತು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಿರ್ಣಯಗಳನ್ನು ಮಂಡಿಸಲಾಗಿದೆ. ಈ ನಿಟ್ಟಿನಲ್ಲಿ ಸರಕಾರ ತಕ್ಷಣ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸ ಬೇಕು ಎಂದು ಆಗ್ರಹಿಸಿದರು
ಈ ಸಂದರ್ಭದಲ್ಲಿ SDTU ದಕ್ಷಿಣ ಕ್ಷೇತ್ರ ಅಧ್ಯಕ್ಷ ಇಕ್ಬಾಲ್ ಕಣ್ಣೂರು, ಸದಸ್ಯ ಸಿದ್ದೀಕ್ ಬೆಂಗರೆ, ಆಟೋ ಯೂನಿಯನ್ ಬೈತ ದೆಕ್ಕೆ ಅಧ್ಯಕ್ಷ ಇಲ್ಯಾಸ್ ಬೆಂಗರೆ ಮತ್ತಿತರರು ಉಪಸ್ಥಿತರಿದ್ದರು.

- Advertisement -

- Advertisement -

Join Whatsapp