Home ಟಾಪ್ ಸುದ್ದಿಗಳು ಕೇರಳದಲ್ಲಿ ಎರಡನೇ ಮಂಕಿಪಾಕ್ಸ್ ಪ್ರಕರಣ ಪತ್ತೆ: UAEನಿಂದ ಬಂದಿದ್ದ ಯುವಕನಿಗೆ ಸೋಂಕು

ಕೇರಳದಲ್ಲಿ ಎರಡನೇ ಮಂಕಿಪಾಕ್ಸ್ ಪ್ರಕರಣ ಪತ್ತೆ: UAEನಿಂದ ಬಂದಿದ್ದ ಯುವಕನಿಗೆ ಸೋಂಕು

ತಿರುವನಂತಪುರಂ: ಯುನೈಟೆಡ್ ಅರಬ್ ಎಮಿರೇಟ್ಸ್(UAE)ನಿಂದ ಬಂದಿದ್ದ ಕೇರಳದ ಎರ್ನಾಕುಲಂನ 26 ವರ್ಷದ ಯುವಕನಿಗೆ ಮಂಕಿಪಾಕ್ಸ್ ಶುಕ್ರವಾರ ದೃಢಪಟ್ಟಿದೆ.


ಅವರ ರಕ್ತದ ಮಾದರಿಗಳನ್ನು ಅಲಪ್ಪುಳರದಲ್ಲಿರುವ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ವೈರಾಲಜಿ ಲ್ಯಾಬ್ ನಲ್ಲಿ ಪರೀಕ್ಷೆ ನಡೆಸಲಾಗಿದೆ. ಪುಣೆಯಲ್ಲಿರುವ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ಜೀನೋಮಿಕ್ ಸೀಕ್ವೆನ್ಸಿಂಗ್ ಗಾಗಿ ಮಾದರಿಗಳನ್ನು ಕಳುಹಿಸಲಾಗಿದೆ.


ಇದು ಈ ವರ್ಷ ರಾಜ್ಯದಲ್ಲಿ ಎರಡನೇ ಮತ್ತು ದೇಶದಲ್ಲಿ ಮೂರನೇ ಮಂಕಿಪಾಕ್ಸ್ ಪ್ರಕರಣವಾಗಿದೆ.


ಈ ಹಿಂದೆ ಮಲಪ್ಪುರಂನ ಎಡವನ್ನಾ ಎಂಬ ಪ್ರದೇಶದ 38 ವರ್ಷದ ವ್ಯಕ್ತಿಗೆ ಸೆಪ್ಟೆಂಬರ್ 18 ರಂದು ಮಂಕಿಪಾಕ್ಸ್ ಕಂಡುಬಂದಿತ್ತು. ನಂತರ ಅವರ ಸೋಂಕಿಗೆ ವೈರಸ್ನ ಕ್ಲೇಡ್ 1 ಬಿ ಸ್ಟ್ರೈನ್ ಕಾರಣ ಎಂದು ತಿಳಿದುಬಂತು.

Join Whatsapp
Exit mobile version