ದ್ವಿತೀಯ ಪಿಯು ಪರೀಕ್ಷೆ: ಚೊಕ್ಕಬೆಟ್ಟು ಜಾಮಿಯಾ ಪದವಿ ಪೂರ್ವ ಕಾಲೇಜಿಗೆ ಶೇಕಡಾ 100 ಫಲಿತಾಂಶ

Prasthutha|

ಮಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಮಂಗಳೂರಿನ ಚೊಕ್ಕಬೆಟ್ಟು ಜಾಮಿಯಾ ಪದವಿ ಪೂರ್ವ ಕಾಲೇಜಿಗೆ ಶೇಕಡಾ 100 ಫಲಿತಾಂಶ ಬಂದಿದೆ.
ಈ ಕಾಲೇಜಿನ ವಿದ್ಯಾರ್ಥಿನಿ ಫಾತಿಮಾ ತಸ್ಮಿಯಾ ವಾಣಿಜ್ಯ ವಿಭಾಗದಲ್ಲಿ 591 ಅಂಕ ಪಡೆದು ರಾಜ್ಯಕ್ಕೆ 7ನೇ ಸ್ಥಾನ ಪಡೆದಿದ್ದಾರೆ. ಇವರು ಬಿ.ಹಮೀದ್ ಹಾಗೂ ಶಂಶಾದ್ ಅವರ ಪುತ್ರಿಯಾಗಿದ್ದಾರೆ.

- Advertisement -


ಅದೇ ರೀತಿ ಜಾಮಿಯಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ರೀನಾಝ್ 577, ಫಾಯಿಝಾ 541, ಹಪ್ರಿಝಾ 524 ಹಾಗೂ ನಿಶ್ಮಾ 523 ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿ ಕಾಲೇಜಿಗೆ ಹೆಸರು ತಂದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.



Join Whatsapp