ಮೊದಲ ದಿನ ಸುಗಮವಾಗಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ

Prasthutha|

ಬೆಂಗಳೂರು: ಫಲಿತಾಂಶ ತಿರಸ್ಕರಿಸಿ ಪರೀಕ್ಷೆ ಆಯ್ಕೆ ಮಾಡಿಕೊಂಡಿರುವವರಿಗೆ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಗುರುವಾರದಿಂದ ಆರಂಭವಾಗಿದ್ದು, ಸೆಪ್ಟೆಂಬರ್ 3ರವರೆಗೆ ನಡೆಯಲಿದೆ. ಒಟ್ಟು 17 ಸಾವಿರದ 469 ಖಾಸಗಿ ವಿದ್ಯಾರ್ಥಿಗಳು, 352 ಪುನರಾವರ್ತಿತ, 593 ಫಲಿತಾಂಶ ತಿರಸ್ಕರಿಸಿರುವ ವಿದ್ಯಾರ್ಥಿಗಳು ಸೇರಿ ಒಟ್ಟು 18 ಸಾವಿರದ 414 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

- Advertisement -


ತಾಲೂಕಿಗೆ ಒಂದರಂತೆ ಒಟ್ಟು 187 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಬೆಂಗಳೂರಿನ ಸೆಂಟ್ ಆನ್ಸ್‌ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಅವರು, ಕೋವಿಡ್ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡು ಸುರಕ್ಷಿತವಾಗಿ ಪರೀಕ್ಷೆ ನಡೆಸಲಾಗುತ್ತಿದ್ದೆ. ಪ್ರೌಢ ಶಾಲೆಗಳನ್ನು ಪುನರಾರಂಭಿಸಿದ ಬಳಿಕ ಪ್ರಾಥಮಿಕ ಶಾಲೆಗಳನ್ನು ತೆರೆಯುವುದರ ಬಗ್ಗೆ ತಜ್ಞರೊಂದಿಗೆ ಚರ್ಚಿಸಲಾಗುವುದು. ಬಳಿಕ ಪೋಷಕರ ಅಭಿಪ್ರಾಯಗಳನ್ನು ಸಂಗ್ರಹಿಸಿ, ಪೋಷಕರು ಒಮ್ಮತ ಸೂಚಿಸಿದರೆ ಮಾತ್ರ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಸಚಿವರು ತಿಳಿಸಿದರು.

Join Whatsapp