ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಬದಲಾವಣೆ!

Prasthutha|

ಬೆಂಗಳೂರು: ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಬದಲಾವಣೆ ಮಾಡಲಾಗಿದೆ.ಈ ಮೊದಲು ಏಪ್ರಿಲ್ 16 ರಿಂದ ಮೇ 6 ರ ವರೆಗೆ ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ ಜೆಇಇ ಪರೀಕ್ಷೆಗಳು ಈ ದಿನಾಂಕದಲ್ಲಿ ಇರುವ ಕಾರಣ ಪಿಯುಸಿ ಬೋರ್ಡ್ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ ಬದಲಾವಣೆ ಮಾಡಿದೆ ಎಂದು ತಿಳಿದು ಬಂದಿದೆ.

- Advertisement -

ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಏಪ್ರಿಲ್ 22 ರಿಂದ ಪರೀಕ್ಷೆ ಪ್ರಾರಂಭ ಆಗಲಿದ್ದು, ಮೇ 11ಕ್ಕೆ ಪರೀಕ್ಷೆಗಳು ಮುಕ್ತಾಯ ಅಗಲಿವೆ. ಪರಿಷ್ಕೃತ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.

ಪರಿಷ್ಕೃತ ವೇಳಾಪಟ್ಟಿ
ಏಪ್ರಿಲ್ 22-ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ.
ಏಪ್ರಿಲ್ 23- ಹಿಂದಿ.
ಏಪ್ರಿಲ್ 25- ಅರ್ಥಶಾಸ್ತ್ರ
ಏಪ್ರಿಲ್ 26- ರಸಾಯನಶಾಸ್ತ್ರ ಹಿಂದುಸ್ಥಾನಿ ಸಂಗೀತ, ಮನಃಶಾಸ್ತ್ರ
ಏಪ್ರಿಲ್ 27- ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಏಪ್ರಿಲ್ 28- ಕನ್ನಡ, ಅರೇಬಿಕ್
ಏಪ್ರಿಲ್ 30- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ 2- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮೇ 4- ಇಂಗ್ಲಿಷ್
ಮೇ 5- ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ ಕೇರ್, ಆಟೋಮೊಬೈಲ್, ಬ್ಯೂಟಿ ಅಂಡ್‌ ವೆಲ್ ನೆಸ್
ಮೇ 6- ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ
ಮೇ 7- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮೇ 9- ಇತಿಹಾಸ, ಭೌತಶಾಸ್ತ್ರ
ಮೇ 11- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

Join Whatsapp