ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

- Advertisement -

ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದೆ. ರಾಜ್ಯದಲ್ಲಿ ಒಟ್ಟು 73.45% % ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

- Advertisement -

6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 93.90% ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%), ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. 93.90 ಶೇಕಾಡ ಫಲಿತಾಂಶ ಪಡೆದು ಉಡುಪಿ ಮೊದಲ ಸ್ಥಾನದಲ್ಲಿದೆ. ಯಾದಗಿರಿ ಜಿಲ್ಲೆಯು ಶೇ.48.45 ಫಲಿತಾಂಶ ಪಡೆದು ಕೊನೆಯ ಸ್ಥಾನದಲ್ಲಿದೆ. ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್ ಮೊದಲ ಸ್ಥಾನ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ದೀಪಶ್ರೀ ಗೆ ಮೊದಲ ಸ್ಥಾನ ಪಡೆದಿದ್ದು, ದಕ್ಷಿಣ ಕನ್ನಡದ ಕೆನಾರ ಪಿಯು ಕಾಲೇಜು‌ ವಿದ್ಯಾರ್ಥಿನಿಯಾಗಿದ್ದಾರೆ. 600 ಕ್ಕೆ ‌ 599 ಅಂಕಗಳನ್ನು ಪಡೆದಿದ್ದಾರೆ.ಕಲಾ ವಿಭಾಗದಲ್ಲಿ ಸಂಜನಾ ಬಾಯಿ ಪ್ರಥಮ ಸ್ಥಾನ ಪಡೆದಿದ್ದಾರೆ.ಬಳ್ಳಾರಿ ಜಿಲ್ಲೆಯ ಇಂದು ಪಿಯು ಕಾಲೇಜು ವಿದ್ಯಾರ್ಥಿನಿಯಾಗಿದ್ದು, 600 ಕ್ಕೆ ‌597 ಅಂಕ ಪಡೆದಿದ್ದಾರೆ.

- Advertisement -

ಇಂದು ಮಧ್ಯಾಹ್ನ 12:45ಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದಲ್ಲಿರುವ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಮಧ್ಯಾಹ್ನ 1:30 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025 ಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ಪಿಯುಸಿ ಫಲಿತಾಂಶವನ್ನು karresults.nic.inನಲ್ಲಿ ಮಧ್ಯಾಹ್ನ 1.30ರ ಬಳಿಕ ವೀಕ್ಷಿಸಬಹುದು. 

- Advertisement -


Must Read

Related Articles