ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಶೇಕಡಾ 29.91ರಷ್ಟು ವಿದ್ಯಾರ್ಥಿಗಳು ತೇರ್ಗಡೆ

Prasthutha|

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, 5,507 ಮಾತ್ರ ಉತ್ತೀರ್ಣರಾಗಿದ್ದು, ಒಟ್ಟಾರೆ ಶೇ.29.91ರಷ್ಟು ಫಲಿತಾಂಶ ಬಂದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

- Advertisement -


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ ವಿದ್ಯಾರ್ಥಿಗಳು, ರಿಸಲ್ಟ್ ತಿರಸ್ಕರಿಸಿದ್ದ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಒಟ್ಟು 18,413 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 17,470 ಖಾಸಗಿ ವಿದ್ಯಾರ್ಥಿಗಳು, 351 ರಿಪೀಟರ್ಸ್, 592 ಪ್ರೆಶರ್ಸ್ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 18,414 ವಿದ್ಯಾರ್ಥಿಗಳ ಪೈಕಿ 5,507 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 12,906 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.


556 ಪ್ರೆಶರ್ಸ್, 183 ರಿಪೀಟರ್ಸ್ ಪಾಸ್ ಆಗಿದ್ದಾರೆ. 17,470 ಖಾಸಗಿ ವಿದ್ಯಾರ್ಥಿಗಳ ಪೈಕಿ 4,768 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 600ಕ್ಕೆ 573 ಅತಿ ಹೆಚ್ಚು ಅಂಕ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ 600 ಅಂಕಕ್ಕೆ 592 ಅತಿ ಹೆಚ್ಚು ಅಂಕ ಪಡೆದಿದ್ದರೆ, ವಾಣಿಜ್ಯ ವಿಭಾಗದಲ್ಲಿ 600ಕ್ಕೆ 594 ಅತಿ ಹೆಚ್ಚು ಅಂಕ ಗಳಿಸಿದ್ದಾರೆ.

- Advertisement -


ಹೊಸಬರಲ್ಲಿ 592 ವಿದ್ಯಾರ್ಥಿಗಳ ಪೈಕಿ 556 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 17470 ಖಾಸಗಿ ಅಭ್ಯರ್ಥಿಗಳ ಪೈಕಿ 4,768 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಒಟ್ಟು 5507 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶೇ 70.83, ವಾಣಿಜ್ಯ ಶೇ. 29.98, ಕಲಾ ವಿಭಾಗ ಶೇ. 39.06 ಫಲಿತಾಂಶ ಬಂದಿದೆ. ಬಾಲಕಿಯರ ಪೈಕಿ ಶೇ.36.72ರಷ್ಟು ಮಂದಿ, ಬಾಲಕರ ಪೈಕಿ ಶೇ. 26.06ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಪರೀಕ್ಷೆಯಲ್ಲೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು 600ರಲ್ಲಿ 573 ಅಂಕ ಪಡೆದಿದ್ದಾರೆ. ವಾಣಿಜ್ಯದಲ್ಲಿ 600- 594, ಕಲಾ ವಿಭಾಗದಲ್ಲಿ 600 -592 ಅಂಕ ಪಡೆದಿದ್ದಾರೆ ಎಂದು ಸಚಿವರು ತಿಳಿಸಿದರು.


ಬೆಂಗಳೂರು ಉತ್ತರ ಪ್ರಥಮ , ಬೆಂಗಳೂರು ದಕ್ಷಿಣ ದ್ವಿತೀಯ ಹಾಗೂ ಬೆಂಗಳೂರು ಗ್ರಾಮಾಂತರ ತೃತೀಯ ಸ್ಥಾನ ಹಾಗೂ
ಕೊನೆಯ ಸ್ಥಾನ ಕೊಡಗು ಜಿಲ್ಲೆ ಪಡೆದಿದೆ. 580 ವಿದ್ಯಾರ್ಥಿಗಳು ಡಿಸ್ಟಿಕ್ಷನ್ ಅಂದರೆ ಶೇ.85 ಕ್ಕಿಂತ ಅಧಿಕ ಪಡೆದಿದ್ದಾರೆ. 1.939 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. 1578 ವಿದ್ಯಾರ್ಥಿಗಳು ಸೆಕೆಂಡ್ ಕ್ಲಾಸ್ ನಲ್ಲಿ ಉತ್ತೀರ್ಣರಾದರೆ, 1410 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಅಭ್ಯರ್ಥಿಗಳು http://karresults.nic.in ಲಿಂಕ್ ಮೂಲಕ ಫಲಿತಾಂಶ ಪಡೆಯಬಹುದು.

Join Whatsapp